ದೇಶ

ಮೋದಿ ಮೇಲೆ ಜನರಿಟ್ಟಿರುವ ನಂಬಿಕೆ ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯವನ್ನು ತೋರಿಸುತ್ತದೆ: ಫಡ್ನವಿಸ್

ಬೃಹತ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ 81 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಎರಡನೇ ಸ್ಥಾನದಲ್ಲಿದ್ದು ಈ ದಿಗ್ವಿಜಯದ ಬಗ್ಗೆ ಮಹಾರಾಷ್ಟ್ರ...

ಮೋದಿ ಮೇಲೆ ಜನರಿಟ್ಟಿರುವ ನಂಬಿಕೆ ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯವನ್ನು ತೋರಿಸುತ್ತದೆ: ಫಡ್ನವಿಸ್
ದೇವೇಂದ್ರ ಫಡ್ನವಿಸ್-ನರೇಂದ್ರ ಮೋದಿ
Published On :
ಮುಂಬೈ: ಬೃಹತ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ 81 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಎರಡನೇ ಸ್ಥಾನದಲ್ಲಿದ್ದು ಈ ದಿಗ್ವಿಜಯದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹರ್ಷ ವ್ಯಕ್ತಪಡಿಸಿದ್ದಾರೆ. 
ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ 81 ಸ್ಥಾನಗಳನ್ನು ಗೆದ್ದಿದ್ದು, ಇದು ನಮಗೆ ದೊಡ್ಡ ಜಯವಾಗಿದೆ. ಅಲ್ಲದೆ ಮತದಾರರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇಟ್ಟಿರುವ ನಂಬಿಕೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. 
ನೋಟು ನಿಷೇಧದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈ ವಿಜಯ ಮೋದಿ ಅವರ ನೋಟು ನಿಷೇಧದ ತೀರ್ಮಾನವನ್ನು ಜನರು ಬೆಂಬಲಿಸಿದ್ದಾರೆ ಎಂದು ತಿಳಿಯುತ್ತದೆ ಎಂದು ಫಡ್ನವಿಸ್ ಹೇಳಿದ್ದಾರೆ. 
ಪಾರ್ಲಿ ಕ್ಷೇತ್ರದಲ್ಲಿ 10 ಸೀಟುಗಳಲ್ಲಿ 8 ಸೀಟುಗಳನ್ನು ಕಳೆದುಕೊಂಡಿರುವುದರಿಂದ ನೈತಿಕ ಹೊಣೆ ಹೊತ್ತು ಬಿಜೆಪಿ ಮುಖಂಡೆ ಪಂಕಜಾ ಮುಂಡೆ ಅವರು ರಾಜಿನಾಮೆ ನೀಡುವ ತೀರ್ಮಾನವನ್ನು ಕೈಗೊಂಡಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಫಡ್ನವಿಸ್ ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ ಎಂದುರ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.