ದೇಶ

ಅಮಿತ್ ಶಾಗಿಂತ ದೊಡ್ಡ 'ಕಸಬ್' ಮತ್ತೊಬ್ಬರಿಲ್ಲ: ಮಾಯಾವತಿ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕಸಬ್ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ....

ಅಮಿತ್ ಶಾಗಿಂತ ದೊಡ್ಡ 'ಕಸಬ್' ಮತ್ತೊಬ್ಬರಿಲ್ಲ: ಮಾಯಾವತಿ
ಮಾಯಾವತಿ
Published On :
ಅಂಬೇಡ್ಕರ್ ನಗರ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕಸಬ್ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ ಅವರು, ಬಿಜೆಪಿ ಅಧ್ಯಕ್ಷರಿಗಿಂತ ದೊಡ್ಡ ಕಸಬ್(ಉಗ್ರ) ಮತ್ತೊಬ್ಬರಿಲ್ಲ ಎಂದು ಗುರುವಾರ ಹೇಳಿದ್ದಾರೆ.
ಇಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಅಮಿತ್ ಶಾ ಅವರಿಗಿಂತ ದೊಡ್ಡ ಕಸಬ್... ಉಗ್ರ ಮತ್ತೊಬ್ಬರಿಲ್ಲ ಎಂಬ ವಿಚಾರ ಈಡೀ ದೇಶಕ್ಕೆ ಗೊತ್ತಿದೆ. ಕಸಬ್ ಕುರಿತ ಅವರ ಹೇಳಿಕೆ ಕೇಸರಿ ಪಕ್ಷದ ಕೀಳುತನ ಪ್ರದರ್ಶಿಸುತ್ತದೆ ಎಂದಿದ್ದಾರೆ.
ಅಮಿತ್ ಶಾ ಅವರು ಉತ್ತರ ಪ್ರದೇಶವನ್ನು ಕಸಬ್ (ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಿಎಸ್‍ಪಿ)ಯಿಂದ ಮುಕ್ತಗೊಳಿಸಿ ಎಂದು ಹೇಳಿದ್ದರು. ಶಾ ಹೇಳಿಕೆಗೆ ಕಾಂಗ್ರೆಸ್ ಸಹ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿಯ ಅಸಹ್ಯ ಯೋಚನೆಗಳೇ ಇಂಥಾ ಹೆಸರು ಹುಟ್ಟುಹಾಕುತ್ತಿವೆ. ಪಕ್ಷದ ಕೋಮುವಾದ ಮನಸ್ಥಿತಿಯನ್ನು ಇದು ತೋರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮನು ಸಿಂಘ್ವಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.