ದೇಶ

ಉ.ಪ್ರದೇಶ ಚುನಾವಣೆ: ಪ್ರಜಾಪ್ರಭುತ್ವ ಹಬ್ಬ ಯಶಸ್ವಿಯಾಗುವಂತೆ ಮಾಡಿ- ಪ್ರಧಾನಿ ಮೋದಿ

ಪಂಚರಾಜ್ಯಗಳ ಪೈಕಿ ಉತ್ತರಪ್ರದೇಶದಲ್ಲಿ 4ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲಾ ಮತದಾರರು ಭಾಗಿಯಾಗಿ ಹಬ್ಬ ಯಶಸ್ವಿಯಾಗುವಂತೆ ಮಾಡಿ ಎಂದು ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಉ.ಪ್ರದೇಶ ಚುನಾವಣೆ: ಪ್ರಜಾಪ್ರಭುತ್ವ ಹಬ್ಬ ಯಶಸ್ವಿಯಾಗುವಂತೆ ಮಾಡಿ- ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :

ನವದೆಹಲಿ: ಪಂಚರಾಜ್ಯಗಳ ಪೈಕಿ ಉತ್ತರಪ್ರದೇಶದಲ್ಲಿ 4ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲಾ ಮತದಾರರು ಭಾಗಿಯಾಗಿ ಹಬ್ಬ ಯಶಸ್ವಿಯಾಗುವಂತೆ ಮಾಡಿ ಎಂದು ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಕರೆ ನೀಡಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಉತ್ತರಪ್ರದೇಶದಲ್ಲಿ 4ನೇ ಹಂತದ ಮತದನಾ ಆರಂಭಗೊಂಡಿದ್ದು, ಮತದಾರರು ತಮ್ಮ ಹಕ್ಕನ್ನು ಬಳಸಿಕೊಂಡು ಪ್ರಜಾಪ್ರಭುತ್ವ ಹಬ್ಬವನ್ನು ಯಶಸ್ವಿಯಾಗುವಂತೆ ಮಾಡಬೇಕು ಎಂದು ಹೇಳಿದ್ದಾರೆ.

ಉತ್ತರಪ್ರದೇಶದ 12 ಜಿಲ್ಲೆಗಳ 53 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ಪ್ರಕ್ರಿಯೆ ಆರಂಭವಾಗಿದೆ. ಕಣದಲ್ಲಿ 680 ಅಭ್ಯರ್ಥಿಗಳಿದ್ದು 3 ಲಕ್ಷಕ್ಕೂ ಅಧಿಕ ಯುವ ಮತದಾರರು ಇಂದು ತಮ್ಮ ಚೊಚ್ಚಲ ಮತದಾನವನ್ನು ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.