ದೇಶ

ದೇಶದಾದ್ಯಂತ ಶಿವರಾತ್ರಿ ಹಬ್ಬದ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದಾದ್ಯಂತ ಶಿವರಾತ್ರಿ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಕ್ರವಾರ...

ದೇಶದಾದ್ಯಂತ ಶಿವರಾತ್ರಿ ಹಬ್ಬದ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :

ನವದೆಹಲಿ: ದೇಶದಾದ್ಯಂತ ಶಿವರಾತ್ರಿ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಕ್ರವಾರ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದೆಲ್ಲೆಡೆ ಮಹಾ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಮೂಲಕ ದೇಶದ ಜನತೆದೆ ಹೃದಯಪೂರ್ವಕವಾಗಿ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.

ದೇಶದೆಲ್ಲೆಡೆ ಶಿವಾಲಯಗಳಲ್ಲಿ ಶಿವಾರಾಧನೆಗಳು ನಡೆಯುತ್ತಿದ್ದು, ವಾರಣಾಸಿಯಲ್ಲಿ ವಿಶೇಷ ಪೂಜೆಗಳು ಆರಂಭಗೊಂಡಿವೆ. ಯಮುನಾ, ಗಂಗಾ ನದಿಯಲ್ಲಿ ಭಕ್ತರು ಜಲಾಭಿಷೇಕ ಮಾಡುತ್ತಿದ್ದು, ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ. ಶಿವಭಕ್ತರು ಇಂದು ಬೆಳಿಗ್ಗೆಯಿಂದಲೇ ಉಪವಾಸ ವ್ರತಗಳನ್ನು ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.