ಕಾಂಗ್ರೆಸ್ ಮಣಿಪುರವನ್ನು ಹಾಳು ಮಾಡಿದೆ, ಬಿಜೆಪಿ 15 ತಿಂಗಳಲ್ಲೇ ಅಭಿವೃದ್ಧಿ ಮಾಡುತ್ತೆ; ಮೋದಿ
ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಮಣಿಪುರವನ್ನು ಸಂಪೂರ್ಣ ಹಾಳು ಮಾಡಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ...

Published On :
ಇಂಫಾಲ್: ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಮಣಿಪುರವನ್ನು ಸಂಪೂರ್ಣ ಹಾಳು ಮಾಡಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಕೇವಲ 15 ತಿಂಗಳಲ್ಲಿ ಅಭಿವೃದ್ಧಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.
ಇಂದು ಇಂಫಾಲ್ ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಬರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.
ಕಳೆದ 15 ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಮಣಿಪುರದಲ್ಲಿ ಅಭಿವೃದ್ಧಿಯನ್ನೇ ಕಡೆಗಣಿಸಿದೆ, ಮಣಿಪುರದ ಅಭಿವೃದ್ಧಿ ನಾಶವಾಗಿ ಹೋಗಿರುವುದಕ್ಕೆ ಹೊಣೆಗಾರರು ಯಾರು? ಎಂದು ಪ್ರಶ್ನಿಸಿದರು.
ಇಲ್ಲಿನ ಮುಖ್ಯಮಂತ್ರಿ ಕಳೆದ 15 ವರ್ಷಗಳಿಂದ ಮಣಿಪುರದಲ್ಲಿ ಅಧಿಕಾರದ ಕುರ್ಚಿಯಲ್ಲಿ ಕುಳಿತುಕೊಂಡಿದ್ದಾರೆ. ಮಣಿಪುರವನ್ನು ಪೂರ್ವದ ಸ್ವಿಟ್ಜರ್ ಲ್ಯಾಂಡ್ ಎಂದೇ ಪರಿಗಣಿಸಲಾಗುತ್ತಿದೆ. ಆದರೆ ನಿಮಗೇನಾದರೂ ಮಣಿಪುರದಲ್ಲಿ ಅಭಿವೃದ್ಧಿಯಾಗಿರುವುದು ಕಾಣಿಸುತ್ತಿದೆಯೇ, ಯುವಕರಿಗೆ ಏನಾದರು ಉದ್ಯೋಗ ಎಂದು ನೆರೆದ ಜನಸ್ತೋಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಪ್ರಶ್ನಿಸಿದರು.
ಈ ಬಾರಿ ಬಿಜೆಪಿಗೆ ಬಾರಿ ಅಧಿಕಾರ ಕೊಡಿ. ಕಾಂಗ್ರೆಸ್ ಕಳೆದ 15 ವರ್ಷಗಳಿಂದ ಮಾಡದ ಅಭಿವೃದ್ಧಿ ಕೆಲಸಗಳನ್ನು ನಾವು 15 ತಿಂಗಳಲ್ಲಿ ಮಾಡುತ್ತೇವೆ ಎಂದು ಪ್ರಧಾನಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


