ದೇಶ

ಬಿಎಂಸಿ ಅಧಿಕಾರಕ್ಕಾಗಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಇಲ್ಲ: ಬಿಜೆಪಿ

ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿವಾಸದಲ್ಲಿ ಕೋರ್ ಕಮಿಟಿ ಸಭೆ ನಡೆಸಿದ್ದು, ಮೈತ್ರಿ ವಿಷಯವಾಗಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದೆ.

ಬಿಎಂಸಿ ಅಧಿಕಾರಕ್ಕಾಗಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಇಲ್ಲ: ಬಿಜೆಪಿ
ಬಿಜೆಪಿ
Published On :
ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿವಾಸದಲ್ಲಿ ಕೋರ್ ಕಮಿಟಿ ಸಭೆ ನಡೆಸಿದ್ದು, ಮೈತ್ರಿ ವಿಷಯವಾಗಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದೆ. 
ಮುಂಬೈ ಬಿಜೆಪಿ ಅಧ್ಯಕ್ಷ ಆಶೀಶ್ ಶೀಲರ್ ದೇವೇಂದ್ರ ಫಡ್ನವೀಸ್, ಸ್ಥಳೀಯ ನಾಯಕರನ್ನು ಭೇಟಿ ಮಾಡಿದ್ದು ಮಾತುಕತೆ ನಡೆಸಿದ್ದಾರೆ. ಬಿಎಂಸಿ ಆಡಳಿತದಲ್ಲಿ ಪಾರದರ್ಶಕತೆ ಜಾರಿಗೊಳಿಸುವುದು ಬಿಜೆಪಿಯ ಪ್ರಮುಖ ಉದ್ದೇಶವಾಗಿದೆ ಎಂದು ಬಿಜೆಪಿ ನಾಯಕರು ಸಭೆಯ ಬಳಿಕ ಹೇಳಿದ್ದು ಕಾಂಗ್ರೆಸ್ ನೊಂದಿಗಿನ ಮೈತ್ರಿಯ ಸಾಧ್ಯತೆಯನ್ನು ನಿರಾಕರಿಸಿದ್ದಾರೆ. 
227 ಸದಸ್ಯ ಬಲದ ಬಿಎಂಸಿಯಲ್ಲಿ ಅಧಿಕಾರ ಹಿಡಿಯಲು 114 ಸದಸ್ಯರ ಬೆಂಬಲ ಅಗತ್ಯವಿದೆ. ಆದರೆ ಬಿಜೆಪಿ 82 ಸದಸ್ಯರನ್ನು ಮಾತ್ರ ಹೊಂದಿದ್ದು, ಶಿವಸೇನೆ 84 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಫಲಿತಾಂಶ ಅತಂತ್ರವಾಗಿ ಮೈತ್ರಿಯ ಅನಿವಾರ್ಯತೆ ಎದುರಾಗಿದ್ದು, ಬಿಎಂಸಿಯಲ್ಲಿ ಯಾವ ಪಕ್ಷಗಳ ಮೈತ್ರಿಕೂಟ ಅಧಿಕಾರ ಹಿಡಿಯಲಿದೆ ಎಂಬ ಬಗ್ಗೆ ಕುತೂಹಲ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.