ದೇಶ

ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್

ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಸಹಪಾಠಿಗಳೇ ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಸಹಪಾಠಿಗಳೇ ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಕಾಲೇಜಿನಲ್ಲಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ವಿನೋದ್ ಎಂಬಾತ ಕಾರಿನಲ್ಲಿ ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ಯುವತಿಯನ್ನು ಕಾರಿಗೆ  ಹತ್ತಿಸಿಕೊಂಡಿದ್ದಾನೆ. ಬಳಿಕ ಮಾರ್ಗ ಮಧ್ಯೆ ಕಾರು ನಿಲ್ಲಿಸಿ ತನ್ನ ಇತರೆ ಸ್ನೇಹಿತರನ್ನೂ ಕಾರಿಗೆ ಹತ್ತಿಸಿಕೊಂಡಿದ್ದಾನೆ. ದುಷ್ಕರ್ಮಿಗಳು ಆಕೆಗೆ ಕುಡಿಯಲು ತಂಪು ಪಾನೀಯ ನೀಡಿದ್ದು, ಇದನ್ನು ಕುಡಿದ ಕೆಲವೇ ಕ್ಷಣಗಳಲ್ಲಿ ಆಕೆ  ಪ್ರಜ್ಞೆತಪ್ಪಿದ್ದಾಳೆ. ಬಳಿಕ ಆಕೆಯ ಮೇಲೆ ಆರೂ ಮಂದಿ ಅತ್ಯಾಚಾರ ನಡೆಸಿದ್ದಾರೆ. ತನಗೆ ಪ್ರಜ್ಞೆ ಬಂದಾಗ ಯಾರೊಂದಿಗಾದರೂ ಈ ವಿಚಾರ ಹೇಳಿದರೆ ಕೊಂದು ಹಾಕುವುದಾಗಿ ಬೆದರಿಕೆ ಹಾಕಿದರು. ಹೀಗಾಗಿ ದೂರು ನೀಡಲು  ಹಿಂಜರಿದೆ.  ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿರುವ ಫರಿದಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಐದು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಗೌರವ್, ಸನ್ನಿ, ರೋಹಟಶ್,  ವಿನೋದ್ ಮತ್ತು ಬಂಟಿ ಎಂದು  ಗುರುತಿಸಲಾಗಿದೆ. ಅಂತೆಯೇ ಮತ್ತರ್ವ ಆರೋಪಿ ಸಚಿನ್ ಪರಾರಿಯಾಗಿದ್ದು, ಆತನ ಬಂಧನಕ್ಕೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.