ಮೋದಿ ಪ್ರಧಾನಿ ಕಾರ್ಯಾಲಯದ ಘನತೆಯನ್ನು ಹಾಳುಮಾಡಿದ್ದಾರೆ: ಕಾಂಗ್ರೆಸ್
ದೀಪಾವಳಿ ಹಾಗೂ ರಂಜಾನ್ ಹಬ್ಬಗಳ ಸಂದರ್ಭಗಳಲ್ಲಿ ಬೆಳಕಿರುವುದರ ಬಗ್ಗೆ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಾರ್ಯಾಲಯದ ಘನತೆಯನ್ನೇ ಹಾಳು ಮಾಡಿದ್ದಾರೆ...

Published On :
ನವದೆಹಲಿ: ದೀಪಾವಳಿ ಹಾಗೂ ರಂಜಾನ್ ಹಬ್ಬಗಳ ಸಂದರ್ಭಗಳಲ್ಲಿ ಬೆಳಕಿರುವುದರ ಬಗ್ಗೆ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕಾರ್ಯಾಲಯದ ಘನತೆಯನ್ನೇ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ಸಮಗ್ರ ಅಭಿವೃದ್ಧಿಗೆ ಉದಾಹರಣೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ರಂಜಾನ್ ಹಬ್ಬದ ಸಂದರ್ಭದಲ್ಲಿ ವಿದ್ಯುತ್ ಇದ್ದರೆ, ದೀಪಾವಳಿ ಹಬ್ಬದಲ್ಲೂ ವಿದ್ಯುತ್ ಇರಬೇಕು ಎಂದಿದ್ದರು. ಈ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು ನರೇಂದ್ರ ಮೋದಿ ಪ್ರಧಾನಿ ಕಾರ್ಯಾಲಯದ ಘನತೆಯನ್ನೇ ಹಾಳುಮಾಡಿದ್ದಾರೆ ಎಂದಿದೆ.
ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ಗೌರವ ನೀಡಬೇಕು, ಈ ರೀತಿಯ ಪದಗಳನ್ನು ಬಳಕೆ ಮಾಡುವುದು ಪ್ರಧಾನಿ ಕಾರ್ಯಾಲಯದ ಘನತೆಗೆ ಧಕ್ಕೆ ಉಂಟುಮಾಡುತ್ತದೆ ಎಂಬುದನ್ನು ಅರಿಯಬೇಕು ಎಂದು ಮನ್ ಪ್ರೀತ್ ಸಿಂಗ್ ಬಾದಲ್ ಹೇಳಿದ್ದಾರೆ. ಇಂತಹ ಮಾತುಗಳೆಲ್ಲಾ ಭಾರತಕ್ಕೆ ಸಕಾರಾತ್ಮಕವಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಂತೆ ವರ್ತಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


