ದೇಶ

ಫೆ.27 ರಂದು ಉ.ಪ್ರ.ದಲ್ಲಿ 5 ನೇ ಹಂತದ ಚುನಾವಣೆ: ಸೂಕ್ಷ್ಮ ಪ್ರದೇಶಗಳಲ್ಲಿ ಧ್ವಜ ಪಥಸಂಚಲನ

ವಿಧಾನಸಭಾ ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶದಲ್ಲಿ ಫೆ.27 ರಂದು 5 ನೇ ಹಂತದ ಮತದಾನ ನಡೆಯಲಿದೆ.

ಫೆ.27 ರಂದು ಉ.ಪ್ರ.ದಲ್ಲಿ 5 ನೇ ಹಂತದ ಚುನಾವಣೆ: ಸೂಕ್ಷ್ಮ ಪ್ರದೇಶಗಳಲ್ಲಿ ಧ್ವಜ ಪಥಸಂಚಲನ
ಉತ್ತರ ಪ್ರದೇಶ
Published On :
ಲಖನೌ: ವಿಧಾನಸಭಾ ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶದಲ್ಲಿ ಫೆ.27 ರಂದು 5 ನೇ ಹಂತದ ಮತದಾನ ನಡೆಯಲಿದೆ. ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಧ್ವಜ ಪಥಸಂಚಲನ ನಡೆಸಲಾಗಿದೆ. 
11 ಜಿಲ್ಲೆಗಳ 51 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಪೈಕಿ 5 ಜಿಲ್ಲೆಗಳು ನೇಪಾಳದೊಂದಿಗೆ ಗಡಿ ಹಂಚಿಕೊಂಡಿವೆ. 5 ನೇ ಹಂತದ ಮತದಾನದಲ್ಲಿ ಎಸ್ ಪಿಯ ಗಾಯತ್ರಿ ಪ್ರಸಾದ್ ಪ್ರಜಾಪತಿ, ಕಾಂಗ್ರೆಸ್ ನ ಅಮಿತ ಸಿಂಗ್ ಹಾಗೂ ಬಿಜೆಪಿಯ ಗರಿಮಾ ಸಿಂಗ್ ಸೇರಿದಂತೆ ಇನ್ನೂ ಹಲವು ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ. 
ಕಳೆದ ವಿಧಾನಸಭಾ ಚುನಾವಣೆಯಲ್ಲಿ 5 ನೇ ಹಂತದ ಮತದಾನ ನಡೆದಿದ್ದ 52 ವಿಧಾನಸಭಾ ಕ್ಷೇತ್ರಗಳಲ್ಲಿ 37 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.