ಅಖಿಲೇಶ್ ಮುಲಾಯಂ ಸಿಂಗ್ ಅವರ ಕನಸುಗಳನ್ನು ನುಚ್ಚು ನೂರು ಮಾಡಿದ್ದಾರೆ: ರಾಜನಾಥ್ ಸಿಂಗ್
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಕನಸುಗಳನ್ನು ನುಚ್ಚು ನೂರು ಮಾಡಿದ್ದಾರೆ...

Published On :
ಬಹರೈಚ್: ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಕನಸುಗಳನ್ನು ನುಚ್ಚು ನೂರು ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್ ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದರ ಮೂಲಕ ಮುಲಾಯಂ ಸಿಂಗ್ ಯಾದವ್ ಅವರ ಕನಸುಗಳನ್ನು ಅಖಿಲೇಶ್ ಯಾದವ್ ನುಚ್ಚು ನೂರು ಮಾಡಿದ್ದಾರೆ ಎಂದು ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಮುಲಾಯಂ ಸಿಂಗ್ ಯಾದವ್ ತಮ್ಮ ಜೀವಿತಾವಧಿಯಲ್ಲಿ ಯಾರ ವಿರುದ್ಧ ಹೋರಾಟ ಮಾಡಿದ್ದರೋ ಅವರೊಂದಿಗೇ ಅಖಿಲೇಶ್ ಯಾದವ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿರುವ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ಖಾತ್ ಸಭಾಗಳಲ್ಲಿ ಭಾಷಣ ಮಾಡುತ್ತಿದ್ದರು. ಆದರೆ ಅವಕಾಶ ಸಿಕ್ಕಿದ ತಕ್ಷಣವೇ ಸೈಕಲ್ ಮೇಲೇರಿ ಕುಳಿತರು. ಆದರೆ ಈಗ ಮುಲಾಯಂ ಸಿಂಗ್ ಯಾದವ್ ಸೈಕಲ್ ನ ಚಕ್ರವನ್ನು ಪಂಕ್ಚರ್ ಮಾಡಿದ್ದಾರೆ, ಶಿವಪಾಲ್ ಸಿಂಗ್ ಯಾದವ್ ಸೈಕಲ್ ನ ಚೈನ್ ನ್ನು ತುಂಡರಿಸಿದ್ದಾರೆ ಎಂದು ರಾಜನಾಥ್ ಸಿಂಗ್ ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


