ಮಲಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ಕೇರಳ ವಿಧಾನಸಭೆಯಲ್ಲಿ ಗದ್ದಲ
ಮಲಯಾಳಂ ಖ್ಯಾತ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಕೇರಳ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ್ದು, ಸರ್ಕಾರದ ವಿರುದ್ಧ ಹರಿಹಾಯ್ದಿರುವ ವಿರೋಧ ಪಕ್ಷಗಳು ಕಲಾಪದಲ್ಲಿ ತೀವ್ರ ಗದ್ದಲವನ್ನುಂಟು ಮಾಡಿವೆ...

Published On :
ತಿರುವನಂತಪುರ: ಮಲಯಾಳಂ ಖ್ಯಾತ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಕೇರಳ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ್ದು, ಸರ್ಕಾರದ ವಿರುದ್ಧ ಹರಿಹಾಯ್ದಿರುವ ವಿರೋಧ ಪಕ್ಷಗಳು ಕಲಾಪದಲ್ಲಿ ತೀವ್ರ ಗದ್ದಲವನ್ನುಂಟು ಮಾಡಿವೆ.
ಆಡಳಿತಾರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸಂಸದರು, ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲಗೊಂಡಿದೆ ಎಂದು ಹೇಳಿ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಿದರು.
ಶೂನ್ಯ ವೇಳೆಯಲ್ಲಿ ವಿಚಾರವನ್ನು ಪ್ರಸ್ತಾಪಿಸಿದ ಯುಡಿಎಫ್ ಶಾಸಕರು, ರಾಜ್ಯ ಸರ್ಕಾರ ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದಾಳಇ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ವಿಧಾನಸಭೆಯಲ್ಲಿ ವಿರೋಧಪಕ್ಷಗಳು ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಹಾಗೂ ಬಹಿಷ್ಕರಿಸಿದ್ದರಿಂದಾಗಿ ಕೆಲವು ಬಾರಿ ತಾತ್ಕಾಲಿಕವಾಗಿ ಅಧಿವೇಶನವನ್ನು ಮುಂದೂಡಲಾಯಿತು.
ಫೆ.17ರ ರಾತ್ರಿ 7.30 ರ ಸುಮಾರಿಗೆ ತ್ರಿಶೂರ್ನಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ನಟಿಯನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ನಂತರ ನಟಿ ನಿರ್ದೇಶಕರೊಬ್ಬರ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


