ದೇಶ

ರಾಷ್ಟ್ರೀಯತೆ ಕುರಿತಾದ ಹೇಳಿಕೆಗಳಿಂದ ಕಿರಣ್ ರಿಜಿಜು ದೂರ ಉಳಿಯಲಿ: ಕಾಂಗ್ರೆಸ್

ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರನ್ನು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವಿವೇಕಿ ಸಚಿವ ಎಂದಿದ್ದಾರೆ.

ರಾಷ್ಟ್ರೀಯತೆ ಕುರಿತಾದ ಹೇಳಿಕೆಗಳಿಂದ ಕಿರಣ್ ರಿಜಿಜು ದೂರ ಉಳಿಯಲಿ: ಕಾಂಗ್ರೆಸ್
ಕಿರಣ್ ರಿಜಿಜು
Published On :
ನವದೆಹಲಿ: ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರನ್ನು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವಿವೇಕಿ ಸಚಿವ ಎಂದಿದ್ದು, ರಾಷ್ಟ್ರೀಯತೆ ಕುರಿತಾದ ಹೇಳಿಕೆಗಳನ್ನು ನೀಡುವುದರಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ. 
ರಾಮಜಾಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಘರ್ಷಣೆ ಹಾಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಕೇಳಿಬಂದಿದ್ದನ್ನು ರಾಷ್ಟ್ರ ವಿರೋಧಿ ಚಟುವಟಿಕೆ ಎಂದಿದ್ದ ಕಿರಣ್ ರಿಜಿಜು ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್, ಕಿರಣ್ ರಿಜಿಜು ವಿದ್ಯಾರ್ಥಿಗಳನ್ನು ರಾಷ್ಟ್ರವಿರೋಧಿಗಳೆಂದು ಬ್ರಾಂಡ್ ಮಾಡುತ್ತಿದ್ದಾರೆ. ಆದರೆ ಅಲ್ಲಿನ ವಾಸ್ತವ ಪರಿಸ್ಥಿತಿಯ ಬಗ್ಗೆ ಗೃಹ ಖಾತೆ ರಾಜ್ಯ ಸಚಿವರಿಗೆ ಮಾಹಿತಿ ಇಲ್ಲ ಎಂದು ಸಂದೀಪ್ ದೀಕ್ಷಿತ್ ಹೇಳಿದ್ದಾರೆ. 
ಎಬಿವಿಪಿ ಹಾಗೂ ಎಐಎಸ್ಎ ವಿದ್ಯಾರ್ಥಿ ಸಂಘಟನೆಗಳ ನಡುವೆ ನಡೆದ ಘಟನೆಯನ್ನು ರಾಷ್ಟ್ರೀಯತೆ, ರಾಷ್ಟ್ರವಿರೋಧಿ ಚಟುವಟಿಕೆಗಳೊಂದಿಗೆ ತಳುಕು ಹಾಕುವುದು ಸರಿಯಲ್ಲ. ಕೆಲವೊಮ್ಮೆ ಕಿರಣ್ ರಿಜಿಜು ಅವಿವೇಕಿ ಸಚಿವರಂತೆ ವರ್ತಿಸುತ್ತಾರೆ. ಅವರೇನು ಅಲ್ಲಿಗೆ ತೆರಳಿ ಪರಿಸ್ಥಿತಿಯನ್ನು ಗಮನಿಸಿಲ್ಲ. ಈ ಹಿಂದೆಯೂ ಇದೇ ರೀತಿಯಲ್ಲಿ ಜೆಎನ್ ಯು ವಿವಿ ವಿದ್ಯಾರ್ಥಿಗಳಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗಿತ್ತು ಎಂದು ಸಂದೀಪ್ ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.