ದೇಶ

ಬಡವರನ್ನು ಬಿಟ್ಟು, ವಿಜಯ್ ಮಲ್ಯರನ್ನು ಗುರಿ ಮಾಡಿ: ಪ್ರಧಾನಿ ಮೋದಿಗೆ ರಾಹುಲ್

ಉತ್ತರಪ್ರದೇಶದಲ್ಲಿರುವ ಬಡವರನ್ನು ಗುರಿ ಮಾಡುವುದನ್ನು ಬಿಟ್ಟು, ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಗುರಿ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಹುಲ್ ಗಾಂಧಿಯವರು ಸೋಮವಾರ...

ಬಡವರನ್ನು ಬಿಟ್ಟು, ವಿಜಯ್ ಮಲ್ಯರನ್ನು ಗುರಿ ಮಾಡಿ: ಪ್ರಧಾನಿ ಮೋದಿಗೆ ರಾಹುಲ್
ರಾಹುಲ್ ಗಾಂಧಿ
Published On :
ಡಿಯೋರಿಯಾ: ಉತ್ತರಪ್ರದೇಶದಲ್ಲಿರುವ ಬಡವರನ್ನು ಗುರಿ ಮಾಡುವುದನ್ನು ಬಿಟ್ಟು, ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಗುರಿ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ. 
ಉತ್ತರಪ್ರದೇಶ ಡಿಯೋರಿಯಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ. 
ಸರ್ಕಾರೇತರ ಬ್ಯಾಂಕ್ ಗಳಿಗೆ ಪಂಗನಾಮ ಹಾಕಿ ತಲೆಮರೆಸಿಕೊಂಡಿರುವ ಮದ್ಯದ ದೊರೆಯನ್ನು ರಕ್ಷಣೆ ಮಾಡುವುದನ್ನು ನಿಲ್ಲಿಸಿ, ಬಡವರು ಹಾಗೂ ಉತ್ತರಪ್ರದೇಶದಲ್ಲಿರುವ ರೈತರಿಗಾಗಿ ಏನಾದಾರೂ ಮಾಡಿ. ಉತ್ತರಪ್ರದೇಶದ ಜನತೆಗೆ ಉದ್ಯೋಗ ದೊರಕಿಸಿಕೊಡುವ ಹಾಗೂ ಅವರ ಅಗತ್ಯಕ್ಕೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬೇಕಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸ್ವದೇಶದಲ್ಲಿ ಸಾಲ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಅವರ ರೂ.1200 ಕೋಟಿ ಸಾಲವನ್ನು ಸರ್ಕಾರ ಯಾವ ಕಾರಣಕ್ಕೆ ಮನ್ನಾ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. 
ಪಂಜರಾಜ್ಯಗಳ ಪೈಕಿ ಉತ್ತರಪ್ರದೇಶ ರಾಜ್ಯದಲ್ಲಿ ಈಗಾಗಲೇ ಚುನಾವಣೆ ಆರಂಭಗೊಂಡಿದ್ದು, 7ಹಂತಗಳ ಪೈಕಿ ಈಗಾಗಲೇ 5ನೇ ಹಂತದ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. 6ನೇ ಹಂತದ ಚುನಾವಣೆ ಮಾರ್ಚ್ 6 ರಂದು ಆರಂಭಗೊಳ್ಳಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.