'ದೆಹಲಿ ವಿವಿ ರಕ್ಷಿಸಿ ಅಭಿಯಾನ'ದಿಂದ ಹಿಂದೆಸರಿದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ
'ದೆಹಲಿ ವಿಶ್ವವಿದ್ಯಾಲಯವನ್ನು ರಕ್ಷಿಸಿ' ಹೊಸ ಅಭಿಯಾನವನ್ನು ಆರಂಭಿಸಿ ಸಾಕಷ್ಟು ಪರ ಹಾಗೂ ವಿರೋಧ ಟೀಕೆಗಳನ್ನು ಎದುರಿಸಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಕೊನೆಗೂ ತಮ್ಮ ಅಭಿಯಾನದಿಂದ ಹಿಂದೆಸರಿದಿದ್ದಾರೆ...

Published On :
ನವದೆಹಲಿ: ದೆಹಲಿ ರಾಮ್ಜಾಸ್ ಕಾಲೇಜಿನಲ್ಲಿ ಘರ್ಷಣೆ ಪ್ರಕರಣ ಸಂಬಂಧಿಸಿದಂತೆ ಎಬಿವಿಪಿ ವಿರುದ್ಧ ತಿರುಗಿಬಿದ್ದು, 'ದೆಹಲಿ ವಿಶ್ವವಿದ್ಯಾಲಯವನ್ನು ರಕ್ಷಿಸಿ' ಹೊಸ ಅಭಿಯಾನವನ್ನು ಆರಂಭಿಸಿ ಸಾಕಷ್ಟು ಪರ ಹಾಗೂ ವಿರೋಧ ಟೀಕೆಗಳನ್ನು ಎದುರಿಸಿದ್ದ ಕಾರ್ಗೀಲ್ ಹುತಾತ್ಮ ಯೋಧನ ಪುತ್ರಿ ಗುರ್ವೇಹರ್ ಕೌರ್ ಅವರು ಮಂಗಳವಾರ ತಮ್ಮ ಅಭಿಯಾನವನ್ನು ಕೈಬಿಟ್ಟಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಾನು ನನ್ನ ಅಭಿಯಾನವನ್ನು ಕೈಬಿಡುತ್ತಿದ್ದೇನೆ. ಈ ಮೂಲಕ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತಿದ್ದೇನೆ. ಏಕಾಂಗಿಯಾಗಿರಲು ಬಯಸಿದ್ದೇನೆ. ಹೇಳಬೇಕಿದ್ದ ಮಾತುಗಳನ್ನು ನಾನು ಹೇಳಿದ್ದೇನೆ. ಅಭಿಯಾನದ ಮೂಲಕ ಸಾಕು ಎನಿಸುವಷ್ಟು ಅನುಭವಿಸಿದೆ. 20 ವಯಸ್ಸಿನಲ್ಲಿ ನಾನು ಇಷ್ಟನ್ನು ಮಾತ್ರ ಸಹಿಸಿಕೊಳ್ಳಬಲ್ಲೆ ಎಂದು ಹೇಳಿಕೊಂಡಿದ್ದಾರೆ.
ನನ್ನ ಧೈರ್ಯ ಹಾಗೂ ಶೌರ್ಯದ ಬಗ್ಗೆ ಯಾರಾದರೂ ಪ್ರಶ್ನೆ ಮಾಡಿದರೆ, ಅಂತಹವರಿಗೆ ನಾನು ಈಗಾಗಲೇ ಹೆಚ್ಚಿನ ರೀತಿಯಲ್ಲಿಯೇ ಉತ್ತರವನ್ನು ನೀಡಿದ್ದೇನೆ. ಇನ್ನು ಮುಂದೆ ಹಿಂಸಾಚಾರ ಹಾಗೂ ಬೆದರಿಕೆಗಳನ್ನು ಹಾಕುವವರು ಒಂದಲ್ಲ ಎರಡು ಬಾರಿ ಆಲೋಚನೆ ಮಾಡುತ್ತಾರೆಂಬುದನ್ನು ಮಾತ್ರ ಖಚಿತವಾಗಿ ಹೇಳುತ್ತೇನೆಂದು ತಿಳಿಸಿದ್ದಾರೆ.
ಇದೇ ವೇಳೆ ಖಾಲ್ಸಾ ಕಾಲೇಜಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತೀಯೊಬ್ಬ ವಿದ್ಯಾರ್ಥಿಗಳು ಭಾಗಿಯಾಗುವಂತೆ ಕರೆ ನೀಡಿರುವ ಅವರು, ಅಭಿಯಾನ ನಡೆಯುತ್ತಿರುವುದು ವಿದ್ಯಾರ್ಥಿಗಳಿಗಾಗಿ, ನನಗಾಗಿ ಅಲ್ಲ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಎಂದಿದ್ದಾರೆ.
ಗುರ್ಮೆಹರ್ ಕೌರ್'ಗೆ ಅತ್ಯಾಚಾರ ಬೆದರಿಕೆ: ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲು
ಎಬಿವಿಪಿ ಸಂಘಟನೆ ವಿರುದ್ದ ತಿರುಗಿ ಬಿದ್ದ ಬಳಿಕ ಗುರ್ಮೆಹರ್ ಕೌರ್ ಅವರಿಗೆ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಅನಾಮಧೇಯ ವ್ಯಕ್ತಿಗಳ ವಿರುದ್ದ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ನಿನ್ನೆಯಷ್ಟೇ ಆರೋಪ ವ್ಯಕ್ತಪಡಿಸಿದ್ದ ಗುರ್ಮೆಹರ್ ಕೌರ್ ಅವರು, ಎಬಿವಿಪಿ ವಿರುದ್ದ ತಿರುಗಿಬಿದ್ದ ಬಳಿಕ ನನಗೆ ಅತ್ಯಾಚಾರ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದರು. ಅಲ್ಲದೆ, ಈ ಕುರಿತಂತೆ ದೆಹಲಿ ಮಹಿಳಾ ಆಯೋಗದ ಮೆಟ್ಟಿಲೇರಿದ್ದರು.
ಪ್ರಕರಣ ಸಂಬಂಧ ಕೂಡಲೇ ಸ್ಪಂದನೆ ನೀಡಿದ್ದ ದೆಹಲಿ ಮಹಿಳಾ ಆಯೋಗ ದೆಹಲಿ ಆಯುಕ್ತರಿಗೆ ಪತ್ರ ಬರೆದು, ಸಂಬಂಧಪಟ್ಟವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.
ಈ ಹಿನ್ನಲೆಯಲ್ಲಿ ಇದೀಗ ದೆಹಲಿ ಪೊಲೀಸರು ಅನಾಮಧೇಯ ವ್ಯಕ್ತಿಗಳ ವಿರುದ್ಧ ಸಂಬಂಧ ಕಾಯ್ದೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಹಿಂದೆ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ, ಲೇಡಿ ಶ್ರೀ ರಾಮ ಕಾಲೇಜು ವಿದ್ಯಾರ್ಥಿನಿ ಗುರ್ವೇಹರ್ ಕೌರ್ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು,
ಕೈ ಬರಹವುಳ್ಳ ಘೋಷ ಪಟ್ಟಿಯನ್ನು ಹಿಡಿದು ನಿಂತಿರುವ ಗುರ್ಮೆಹರ್ ಕೌರ್, ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ. ನಾನು ಎಬಿವಿಪಿಯಿಂದ ಭಯಗೊಂಡಿಲ್ಲ. ನಾನು ಒಂಟಿಯಲ್ಲ. ನನ ಜತೆಗೆ ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ಇದ್ದಾರೆ. ಭಾರತದ ಪ್ರತಿಯೊಬ್ಬ ಪ್ರಜೆಗೂ ಮಾತನಾಡುವ ಹಕ್ಕಿದೆ. ವಾದಿಸುವ ಅವಕಾಶವಿದೆ. ಸರಿ ತಪ್ಪುಗಳನ್ನು ವಿಮರ್ಶಿಸುವ ಸ್ವಾತಂತ್ರವಿದೆ. ಇದನ್ನು ರಾಷ್ಟ್ರ, ಸಂಸ್ಕೃತಿ, ಆಚರಣೆ ಇತ್ಯಾದಿ ಮಾನದಂಡಗಳಡಿ ಹತ್ತಿಕ್ಕುವ ಪ್ರಯತ್ನ ಬೇಡ. ಎಬಿವಿಪಿ ಕಾರ್ಯಕರ್ತರು ತಮ್ಮ ಮೇಲೆ ಕಲ್ಲುಗಳನ್ನು ಎಸೆದು ಗಾಯಗೊಳಿಸಬಹುದು. ಆದರೆ ನಮ್ಮ ತತ್ವಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹುತಾತ್ಮ ಯೋಧನ ಪುತ್ರಿ ಬರೆದುಕೊಂಡಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Tweetಟ್ವೀಟ್ಫೇಸ್ ಬುಕ್ ಪೋಸ್ಟ್Face book PostGurmehar KaurSave Delhi University campaignದೆಹಲಿ ವಿವಿ ರಕ್ಷಿಸಿ ಅಭಿಯಾನಗುರ್ವೇಹರ್ ಕೌರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


