ಕಾನ್ಪುರ ರೈಲು ದುರಂತ ಬಗ್ಗೆ ಸುಳ್ಳು ಹೇಳಿಕೆ: ಮೋದಿ ಕ್ಷಮೆ ಯಾಚನೆಗೆ ಕಾಂಗ್ರೆಸ್ ಆಗ್ರಹ
ಕಾನ್ಪುರ ರೈಲು ದುರಂತವನ್ನು ಭಾರತದ ವಿರುದ್ಧ ಷಡ್ಯಂತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರೆ ರೈಲ್ವೆ ಇಲಾಖೆ ಡಿಜಿ ಪ್ರಧಾನಿ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.

Published On :
ನವದೆಹಲಿ: ಕಾನ್ಪುರ ರೈಲು ದುರಂತವನ್ನು ಭಾರತದ ವಿರುದ್ಧ ಷಡ್ಯಂತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರೆ ರೈಲ್ವೆ ಇಲಾಖೆ ಡಿಜಿ ಪ್ರಧಾನಿ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಕಾನ್ಪುರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡಿರುವ ಪ್ರಧಾನಿ ಕ್ಷಮೆ ಯಾಚಿಸಬೇಕೆಂದು ಈಗ ಕಾಂಗ್ರೆಸ್ ಪಟ್ಟು ಹಿಡಿದಿದೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸಾರ್ಹತೆಯನ್ನೂ ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ಮನ್ ಪ್ರೀತ್ ಸಿಂಗ್ ಬಾದಲ್, ರೈಲ್ವೆ ಸಚಿವ ಸುರೇಶ್ ಪ್ರಭು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆ ಡಿಜಿ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆದಿರಲಿಲ್ಲ ಎಂದು ಹೇಳಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಕಾನ್ಪುರ ರೈಲು ದುರಂತವನ್ನು ಭಾರತದ ವಿರುದ್ಧ ನಡೆದಿರುವ ವಿಧ್ವಂಸಕ ಕೃತ್ಯದ ಸಂಚು ಎಂದಿದ್ದರು. ಇದೇ ಹೇಳಿಕೆಯನ್ನು ಚುನಾವಣೆಯ ಪ್ರಚಾರದಲ್ಲೂ ಹೇಳಿದ್ದಾರೆ. ಸುಳ್ಳು ಹೇಳಿಕೆ ನೀಡಿರುವ ಪ್ರಧಾನಿ ಮೋದಿ ಕ್ಷಮೆ ಯಾಚಿಸಬೇಕೆಂದು ಬಾದಲ್ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್statementKanpur train tragedyಕಾನ್ಪುರ ರೈಲು ದುರಂತಸುಳ್ಳು ಹೇಳಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


