ದೇಶ

ಜೇಟ್ಲಿ ಹಣಕಾಸು ದಾಖಲೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಬ್ಯಾಂಕ್ ಖಾತೆಗಳ ವಿವರ, ಟ್ಯಾಕ್ಸ್ ರಿಟರ್ನ್ಸ್ ಹಾಗೂ ಇತರೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ...

ಜೇಟ್ಲಿ ಹಣಕಾಸು ದಾಖಲೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಬ್ಯಾಂಕ್ ಖಾತೆಗಳ ವಿವರ, ಟ್ಯಾಕ್ಸ್ ರಿಟರ್ನ್ಸ್ ಹಾಗೂ ಇತರೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಬೇಕು ಎಂದು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಜೇಟ್ಲಿ ಹಾಗೂ ಅವರ ಕುಟುಂಬ ಸದಸ್ಯರ ಬ್ಯಾಂಕ್ ದಾಖಲೆಗಳನ್ನು ಕೇಳಿದ್ದ ಕೇಜ್ರಿವಾಲ್ ಅವರ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ರಾಜೀವ್ ಸಹಾಯ್ ಎಂದ್ಲಾವ್ ಅವರು ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದು ಹೇಳಿದ್ದಾರೆ.
ತಮ್ಮ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ಕೇರ್ಜಿವಾಲ್ ಪರ ವಕೀಲ ಅನುಪಮ್ ಶ್ರೀವಾತ್ಸವ್ ಅವರು ಹೇಳಿದ್ದಾರೆ.
ಡಿಡಿಸಿಎ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಆರೋಪ ಮಾಡಿದ್ದ ಕೇಜ್ರಿವಾಲ್, ರಾಘವ್ ಚೆಡ್ಡಾ, ಕುಮಾರ್ ವಿಶ್ವಾಸ ಹಾಗೂ ಆಶುತೋಷ್ ಹಾಗೂ ಸಂಜಯ್ ಸಿಂಗ್ ಅವರ ವಿರುದ್ಧ ಜೇಟ್ಲಿ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದು, 10 ಕೋಟಿ ರುಪಾಯಿ ಪರಿಹಾರ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.