ಕೊಚ್ಚಿಯಲ್ಲಿ ಸರಣಿ ಅಪಘಾತ: ನಾಲ್ವರ ಸಾವು
ಕೊಚ್ಚಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡಿದ್ದ ಬಸ್ ವೊಂದು ಕಾರು ಮತ್ತು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವರಪ್ಪುಜಾ ಬಳಿ...

ಕೊಚ್ಚಿ: ಕೊಚ್ಚಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡಿದ್ದ ಬಸ್ ವೊಂದು ಕಾರು ಮತ್ತು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವರಪ್ಪುಜಾ ಬಳಿ ಸೋಮವಾರ ನಡೆದಿದೆ.
ವರಪ್ಪುಜಾ ಬಳಿ ಇಂದು ಬಳಗಿನ ಜಾವ 2 ಗಂಟೆ ಸುಮಾರಿಗೆ ವೇಗವಾಗಿ ಬರುತ್ತಿದ್ದ ಬಸ್ ವೊಂದು ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ನಂತರ ಸೇತುವೆಯಲ್ಲಿ ಚಲಿಸುತ್ತಿದ್ದ ಕಾರು ಮತ್ತು ಬೈಕ್ ಗೆ ಏಕಾಏಕಿ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಐವರು ವಿದ್ಯಾರ್ಥಿಗಳು ಚಲಿಸುತ್ತಿದ್ದರು. ಬಸ್ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಷಯ್ ಶಶಿಕುಮಾರ್ (20) ಮತ್ತು ಜಿಜಿಶಾ (23) ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಚಲಿಸುತ್ತಿದ್ದ ಹರಿಶಂಕರ್ (27), ಕಿರಣ್ (25) ಎಂಬುವವರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಉಳಿದ ಮೂವರು ವಿದ್ಯಾರ್ಥಿಗಳು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಯೊಂದರಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


