ದೇಶ

ಛತ್ತೀಸ್ಗಢದಲ್ಲಿ ಭೀಕರ ಅಪಘಾತ: ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ, 4 ಸಾವು, 26 ಜನರಿಗೆ ಗಾಯ

ಛತ್ತೀಸ್ಗಢದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಬಸ್ ಹಾಗೂ ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿ, 26 ಜನರಿಗೆ ಗಾಯವಾಗಿರುವ ಘಟನೆ ಗರಿಯಾಬಾಂದ್ ನಲ್ಲಿ ಭಾನುವಾರ ತಡರಾತ್ರಿ...

ಛತ್ತೀಸ್ಗಢದಲ್ಲಿ ಭೀಕರ ಅಪಘಾತ: ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ, 4 ಸಾವು, 26 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ರಾಯ್ಬುರ: ಛತ್ತೀಸ್ಗಢದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಬಸ್ ಹಾಗೂ ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿ, 26 ಜನರಿಗೆ ಗಾಯವಾಗಿರುವ ಘಟನೆ ಗರಿಯಾಬಾಂದ್ ನಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಕುಟುಂಬದ ಕಾರ್ಯಕ್ರಮವೊಂದಕ್ಕೆ ಭೇಟಿ ನೀಡಿದ ಬಳಿಕ 40 ಮಂದಿಯಿದ್ದ ಬಸ್ ವೊಂದು ಮರಳಿ ಮನಾ ಬಸ್ತಿ ಗ್ರಾಮಕ್ಕೆ ಹಿಂತಿರುಗಿ ಬರುತ್ತಿತ್ತು, ಗರಿಯಾಬಾಂದ್-ರಾಯ್ಪುರ ರಸ್ತೆ ಬಳಿ ಬರುತ್ತಿದ್ದಂತೆ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್ ವೊಂದಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

ಪರಿಣಾಮ ಮೂವರು ಮಹಿಳೆಯರು ಹಾಗೂ ಓರ್ವ ಬಾಲಕಿಯೊಬ್ಬಳು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ ಎಂದು ಗರಿಯಾಬಾಂದ್ ಹೆಚ್ಚುವರಿ ಪೊಲೀಸ್ ಅಧಿಕಾರಿ ನೇಹಾ ಪಾಂಡೆಯವರು ಹೇಳಿದ್ದಾರೆ.

ದುರ್ಘಟನೆ ಸಂಭವಿಸಿದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ 26 ಮಂದಿಯ ಪೈಕಿ 12 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಡಾ.ಬಿ.ಆರ್. ಅಂಬೇಡ್ಕರ್ ಮೆಮೊರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 14 ಮಂದಿಯನ್ನು ರಜಿಮ್ ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮೃತರ ಕುರಿತಂತೆ ಈ ವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗುತ್ತಿಲ್ಲ. ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.