ಅಭಿವೃದ್ಧಿಗೆ ಅಡ್ಡಗಾಲು ಹಾಕಬೇಡಿ: ಕೇಜ್ರಿವಾಲ್ ಗೆ ಬಿಜೆಪಿ
ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಜವಾಬ್ದಾರಿಗಳಿಂದ ನುಣುಚಿಕೊಳ್ಳದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಎಚ್ಚರಿಕೆ ನೀಡಿದೆ.

Published On :
ನವದೆಹಲಿ: ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಜವಾಬ್ದಾರಿಗಳಿಂದ ನುಣುಚಿಕೊಳ್ಳದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಎಚ್ಚರಿಕೆ ನೀಡಿದೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಕಳೆದ 2 ವರ್ಷಗಳಿಂದ ಅಧಿಕಾರದಲ್ಲಿದೆ. ಆದರೆ ಹೊಸ ಅಭಿವೃದ್ಧಿ ಕಾರ್ಯಗಳು ಜಾರಿಯಾಗಿದ್ದನ್ನು ದೆಹಲಿ ಈ ವರೆಗೆ ಕಂಡಿಲ್ಲ. ಉಚಿತ ನೀರು ಪೂರೈಕೆ ಸೇರಿದಂತೆ ಚುನಾವಣೆಗೂ ಮುನ್ನ ಕೇಜ್ರಿವಾಲ್ ನೀಡಿದ್ದ ಭರವಸೆಗಳು ಈ ವರೆಗೂ ಈಡೇರಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಟೀಕಿಸುವ ಬದಲು ದೆಹಲಿಯಲ್ಲಿ ನಡೆಯಬೇಕಿರುವ ಅಭಿವೃದ್ಧಿಯತ್ತ ಗಮನ ಹರಿಸಲಿ, ದೆಹಲಿಯ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿಯನ್ನು ನಿರ್ವಹಿಸುವುದು ಅರವಿಂದ್ ಕೇಜ್ರಿವಾಲ್ ಅವರ ಕರ್ತವ್ಯ ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ, ದೆಹಲಿ ಜಲ ಸ೦ಪನ್ಮೂಲ ಸಚಿವ ಕಪಿಲ್ ಮಿಶ್ರಾ ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲೇ ನೀರು ಪೂರೈಕೆ ಕೊರತೆ ಇದೆ ಎಂದು ಆರೋಪಿಸಿದ್ದಾರೆ. ನೀರು ಪೂರೈಕೆ ಕೊರತೆಗೆ ಸಂಬಂಧಿಸಿದಂತೆ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ತಿವಾರಿ ಹಲವು ಪ್ರದೇಶಗಳಲ್ಲಿ ನೀರು ಪೂರೈಕೆ ಸ್ಥಗಿತಗೊಂಡು ತಿಂಗಳುಗಳೇ ಕಳೆದಿವೆ ಎಂದಿದ್ದಾರೆ.
ಇನ್ನು ಚುನಾವಣೆಯಲ್ಲಿ ಗೆದ್ದ ನಂತರ ಆಮ್ ಆದ್ಮಿ ಪಕ್ಷದ ನಾಯಕರು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡದೇ ಇರುವ ಆರೋಪಗಳೂ ಕೇಳಿಬರುತ್ತಿದೆ, ಆದ್ದರಿಂದ ದೆಹಲಿ ಸಿಎಂ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದನ್ನು ಬಿಟ್ಟು ದೆಹಲಿಯ ಅಭಿವೃದ್ಧಿ ಕಡೆಗೆ ಗಮನ ಹರಿಸಬೇಕೆಂದು ಮನೋಜ್ ತಿವಾರಿ ಆಮ್ ಆದ್ಮಿ ಪಕ್ಷಕ್ಕೆ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


