ಮಸೂದ್ ಅಜರ್ ನಿಷೇಧಕ್ಕೆ ಚೀನಾ ಬೆಂಬಲಿಸುವ ವಿಶ್ವಾಸವಿದೆ: ರಾಜನಾಥ್ ಸಿಂಗ್
ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖಂಡ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ವಿಚಾರದಲ್ಲಿ ಚೀನಾ ಭಾರತಕ್ಕೆ ಬೆಂಬಲಿಸುವ ವಿಶ್ವಾಸವಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Published On :
ನವದೆಹಲಿ: ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖಂಡ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ವಿಚಾರದಲ್ಲಿ ಚೀನಾ ಭಾರತಕ್ಕೆ ಬೆಂಬಲಿಸುವ ವಿಶ್ವಾಸವಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಳೆದ ವರ್ಷ ಡಿ.30 ರಂದು ಚೀನಾ ಮಸೂದ್ ಅಜರ್ ಗೆ ವಿಶ್ವಸಂಸ್ಥೆಯಿಂದ ನಿಷೇಧ ವಿಧಿಸುವ ವಿಷಯವಾಗಿ ಚೀನಾ ಮತ್ತೊಮ್ಮೆ ಅಡ್ಡಗಾಲು ಹಾಕಿತ್ತು. ಸತತ ಮೂರನೇ ಬಾರಿಗೆ ಚೀನಾ ಭಾರತದ ಪ್ರಯತ್ನಕ್ಕೆ ಅಡ್ಡಿ ಉಂಟುಮಾಡಿದ್ದು, ಚೀನಾ ನಡೆಗೆ ಪ್ರತಿಕ್ರಿಯಿಸಿದ್ದ ಭಾರತ, ಚೀನಾ ಸ್ವತಃ ಭಯೋತ್ಪಾದನೆಯ ಸಮಸ್ಯೆ ಎದುರಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ರೀತಿಯ ಭಯೋತ್ಪಾದನೆಗೂ ವಿರೋಧ ವ್ಯಕ್ತಪಡಿಸಿತ್ತು, ಆದರೆ ಈಗ ಮಸೂದ್ ಅಜರ್ ವಿಷಯದಲ್ಲಿ ಭಾರತದ ಯತ್ನಕ್ಕೆ ಅಡ್ಡಿ ಉಂಟು ಮಾಡುತ್ತಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
ಇಷ್ಟೆಲ್ಲದರ ಹೊರತಾಗಿಯೂ, ಭಾರತ ಚೀನಾದೊಂದಿಗೆ ಮಸೂದ್ ಅಜರ್ ವಿಷಯವಾಗಿ ಮಾತುಕತೆ ಮುಂದುವರೆಸುವುದಾಗಿ ತಿಳಿಸಿದ್ದು ಭಾರತದ ಯತ್ನಕ್ಕೆ ಬೆಂಬಲ ಸಿಗುವ ವಿಶ್ವಾಸ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


