ಸುದೀಪ್ ಬಂಡೋಪಧ್ಯಾಯ ಬಂಧನಕ್ಕೆ ಮಮತಾ ಖಂಡನೆ, ಪ್ರತಿಭಟನೆಗೆ ನಿರ್ಧಾರ
ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಬಂಧನವನ್ನು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಖಂಡಿಸಿದ್ದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Published On :
ಕೋಲ್ಕತಾ: ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಬಂಧನವನ್ನು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಖಂಡಿಸಿದ್ದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದು, ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಬಂಧಿಸಬೇಕೆಂದು ಹೇಳಿದ್ದಾರೆ.
" ನೋಟು ನಿಷೇಧವನ್ನು ವಿರೊಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಕೇಂದ್ರ ಸರ್ಕಾರದ ದ್ವೇಷ ರಾಜಕೀಯವನ್ನು ನಾವು ವಿರೋಧಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಡಿಸೆಂಬರ್ 3ರಂದು ಟಿಎಂಸಿ ಸಂಸದ ತಪಸ್ ಪಾಲ್ ಅವರನ್ನು ಬಂಧಿಸಿದ್ದ ಸಿಬಿಐ ಜ.3 ರಂದು ಸಿಬಿಐ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದ ತೃಣಮೂಲ ಕಾಂಗ್ರೆಸ್ ಸಂಸದೀಯ ನಾಯಕ ಸುದೀಪ್ ಬಂಡೋಪಧ್ಯಾಯ ಅವರನ್ನು ವಶಕ್ಕೆ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mamata Banerjeeಮಮತಾ ಬ್ಯಾನರ್ಜಿತೃಣಮೂಲ ಕಾಂಗ್ರೆಸ್TMCಟಿಎಂಸಿSudip BandyopadhyayRose Valley Chit Fund scamರೋಸ್ ವ್ಯಾಲಿ ಚಿಟ್ ಫಂಡ್ ಹಗರಣಸುದೀಪ್ ಬಂಡೋಪಾಧ್ಯಾಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


