ದೇಶ

ವಿಧಾನಸಭೆ ಚುನಾವಣೆ: ಬಿಜೆಪಿಗೆ ನೋಟು ನಿಷೇಧದ ಲಾಭ ಪಡೆಯುವ ವಿಶ್ವಾಸ, ಪಾರದರ್ಶಕ ಚುನಾವಣೆಗೆ 'ಕೈ' ಆಗ್ರಹ

ಕೇಂದ್ರ ಚುನಾವಣಾ ಆಯೋಗ ಉತ್ತರ ಪ್ರದೇಶ ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿರುವುದನ್ನು...

ವಿಧಾನಸಭೆ ಚುನಾವಣೆ: ಬಿಜೆಪಿಗೆ ನೋಟು ನಿಷೇಧದ ಲಾಭ ಪಡೆಯುವ ವಿಶ್ವಾಸ, ಪಾರದರ್ಶಕ ಚುನಾವಣೆಗೆ 'ಕೈ' ಆಗ್ರಹ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಉತ್ತರ ಪ್ರದೇಶ ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿರುವುದನ್ನು ಹಲವು ರಾಜಕೀಯ ಪಕ್ಷಗಳು ಸ್ವಾಗತಿಸಿವೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷ, ನೋಟ್ ನಿಷೇಧದ ನಂತರ ಜನರಿಂದ ಬಂದ ಸಕಾರಾತ್ಮಕ ಪ್ರತಿಕ್ರಿಯೆಯಿಂದಾಗಿ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಆದರೆ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಆತಂಕದಲ್ಲಿರುವ ಪ್ರತಿಪಕ್ಷ ಕಾಂಗ್ರೆಸ್, ಪಾರದರ್ಶಕ ಮತ್ತು ನ್ಯಾಯಯುತ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.
ವಿಧಾನಸಭೆ ಚುನಾವಣೆಗಳು ರಾಜ್ಯ ಮಟ್ಟದ ವಿಷಯಗಳ ಮೇಲೆ ನಡೆಯುತ್ತವೆ. ಆದರೆ ನೋಟ್ ನಿಷೇಧದ ನಂತರ ದೇಶಾದ್ಯಂತ ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಇದು ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಜಿವಿಎಲ್ ನರಸಿಂಹರಾವ್ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರ 500 ಹಾಗೂ 1000 ನೋಟ್ ನಿಷೇಧಿಸಿದ ನಂತರ ಬಿಜೆಪಿ ಪರವಾದ ಪ್ರಬಲ ಅಲೆ ಇದೆ. ಹೀಗಾಗಿ ಎಲ್ಲಾ ಐದು ರಾಜ್ಯಗಳಲ್ಲೂ ನಾವು ಗೆಲ್ಲುವ ನಿರೀಕ್ಷೆ ಇದೆ ಎಂದು ರಾವ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ನೋಟ್ ನಿಷೇಧಿಸುವ ಮೂಲಕ ಪ್ರಜಾಪ್ರಭುತ್ವದ 'ಹೋಮ' ಮಾಡಿದ್ದು, ಇದರ ವಿರುದ್ಧ ಜನ ಮತ ಚಲಾಯಿಸಲಿದ್ದಾರೆ. ಹೀಗಾಗಿ ಉತ್ತರಖಂಡ್ ಹಾಗೂ ಮಣಿಪುರ ಸೇರಿದಂತೆ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಆದರೆ ಚುನಾವಣಾ ಆಯೋಗ ಪಾರದರ್ಶಕ ಮತ್ತು ನ್ಯಾಯಯುತ ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.