ಕಾಸರಗೋಡು ಸಮೀಪ ಕಾರು-ಟ್ರಕ್ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು
ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ...

Published On :
ಕಾಸರಗೋಡು: ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಸಾವಿಗೀಡಾದವರು ತ್ರಿಶೂರ್ ನ ಚೆಲಕ್ಕರದವರಾಗಿದ್ದಾರೆ.
ಮೃತಪಟ್ಟವರನ್ನು ಡಾ.ರಾಮನಾರಾಯಣನ್ ಅವರ ಪತ್ನಿ ವಲ್ಸಲಾ, ಪುತ್ರ ರಂಜಿತ್ ಮತ್ತು ಆತನ ಸ್ನೇಹಿತ ನಿತಿನ್ ಎಂದು ಗುರುತಿಸಲಾಗಿದೆ.
ಈ ಇಬ್ಬರು ಯುವಕರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಎಎಲ್ಎನ್ ರಾವ್ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕ್ರಿಸ್ ಮಸ್ ರಜೆಯ ಬಳಿಕ ಇವರಿಬ್ಬರನ್ನು ಕಾಲೇಜಿನಲ್ಲಿ ಬಿಟ್ಟು ಬರಲೆಂದು ದಂಪತಿ ಹೊರಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


