ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಜಸ್ಟೀಸ್ ಖೇಹರ್ ಪ್ರಮಾಣ ವಚನ ಸ್ವೀಕಾರ
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಬುಧವಾರ ಬೆಳಗ್ಗೆ ಅಧಿಕಾರ...

Published On :
ನವದೆಹಲಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಬುಧವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಅವರ ಅಧಿಕಾರಾವಧಿ ನಿನ್ನೆಗೆ ಮುಗಿದಿದೆ.
ಇಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನ್ಯಾಯಮೂರ್ತಿ ಖೇಹರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಸಚಿವರು ಹಾಜರಿದ್ದರು.
ಡಿಸೆಂಬರ್ 19ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನ್ಯಾಯಮೂರ್ತಿ ಖೇಹರ್ ಅವರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಅನುಮೋದನೆ ನೀಡಿ ಅಂಕಿತ ಹಾಕಿದ್ದರು.
64 ವರ್ಷದ ಖೇಹರ್ ಇಂದು ಭಾರತದ 44ನೇ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡಿದ್ದು ಮುಂದಿನ ಏಳು ತಿಂಗಳುಗಳ ಕಾಲ ಹುದ್ದೆ ನಿರ್ವಹಿಸಲಿದ್ದಾರೆ.
ನ್ಯಾಯಮೂರ್ತಿ ಖೇಹರ್ ಅವರನ್ನು ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಬಾರದೆಂದು ಒತ್ತಾಯಿಸಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ಕೂಡ ತಳ್ಳಿ ಹಾಕಿತ್ತು. ಈ ಹಿಂದೆ ಸುಪ್ರೀಂ ಕೋರ್ಟ್ ಇಂತಹ ಎರಡು ಅರ್ಜಿಗಳನ್ನು ತಿರಸ್ಕರಿಸಿತ್ತು. ಸಾರ್ವಜನಿಕ ಹಿತದೃಷ್ಟಿಯಿಂದ ಅರ್ಜಿ ವಜಾಗೊಳಿಸುವುದಾಗಿ ನ್ಯಾಯಾಲಯ ಹೇಳಿತ್ತು.
ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾಯಮೂರ್ತಿ ಖೇಹರ್ ಅವರು ಅನರ್ಹರು ಎಂದು ಪರಿಗಣಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


