ದೇಶ

ವಿವಿಐಪಿ ಕ್ಯಾಪ್ಟರ್ ಹಗರಣ: ಸಂಜೀವ್ ತ್ಯಾಗಿ, ಖೇತನ್ ಗೆ ಜಾಮೀನು

ವಿವಿಐಪಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ಭಾರತೀಯ ವಾಯುಪಡೆಯ...

ವಿವಿಐಪಿ ಕ್ಯಾಪ್ಟರ್ ಹಗರಣ: ಸಂಜೀವ್ ತ್ಯಾಗಿ, ಖೇತನ್ ಗೆ ಜಾಮೀನು
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ವಿವಿಐಪಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ ಅವರ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಹಾಗೂ ವಕೀಲ ಗೌತಮ್ ಖೇತನ್ ಅವರಿಗೆ ಬುಧವಾರ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ತಲಾ ಎರಡು ಲಕ್ಷ ರುಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಸ್ಯುರಿಟಿ ಮೇಲೆ ಜಾಮೀನು ನೀಡಿದ್ದಾರೆ. ಅಲ್ಲದೆ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಮತ್ತು ಸಾಕ್ಷ್ಯ ನಾಶಪಡಿಸದಂತೆ ಇಬ್ಬರು ಆರೋಪಿಗಳಿಗೆ ಎಚ್ಚರಿಸಿದೆ.
ಕೋರ್ಟ್ ಕಳೆದ ವಾರ ಹಗರಣದ ಮತ್ತೊಬ್ಬ ಪ್ರಮುಖ ಆರೋಪಿ ಎಸ್ ಪಿ ತ್ಯಾಗಿ ಅವರಿಗೆ ಜಾಮೀನು ನೀಡಿತ್ತು. 
3,600 ಕೋಟಿ ರು. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಎಸ್.ಪಿ.ತ್ಯಾಗಿ, ಅವರ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಹಾಗೂ ಗೌತಮ್ ಖೇತನ್ ಅವರನ್ನು ಸಿಬಿಐ ಡಿಸೆಂಬರ್ 9ರಂದು ದೆಹಲಿಯಲ್ಲಿ ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.