ಬಿಎಸ್ಪಿ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಮುಸ್ಲಿಂ ಮತಗಳ ಮೇಲೆ ಮಾಯಾ'ಗಣ್ಣು'
ಕೇಂದ್ರ ಚುನಾವಣಾ ಆಯೋಗ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟಿಸಿದ...

Published On :
ಲಖನೌ: ಕೇಂದ್ರ ಚುನಾವಣಾ ಆಯೋಗ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟಿಸಿದ ಮಾರನೆ ದಿನವೇ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ನಾಯಕ ಮಾಯಾವತಿ ಅವರು ತಮ್ಮ ಪಕ್ಷದ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 11ರಿಂದ ಏಳು ಹಂತಗಳ ಚುನಾವಣೆ ನಡೆಯಲಿದ್ದು, 403 ಅಭ್ಯರ್ಥಿಗಳ ಪೈಕಿ ಇಂದು 100 ಅಭ್ಯರ್ಥಿಗಳ ಪಟ್ಟಿಯನ್ನು ಮಾಯಾವತಿ ಅವರು ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಫೆ.11ರಂದು ಮತದಾನ ನಡೆಯುತ್ತಿರುವ ಪಶ್ಚಿಮ ಉತ್ತರ ಪ್ರದೇಶದ ಬಹುತೇಕ ಅಭ್ಯರ್ಥಿಗಳು ಸ್ಥಾಪ ಪಡೆದಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ಬಿಎಸ್ಪಿ, ದಲಿತ ಹಾಗೂ ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟಿದೆ. ಈಗ ಬಿಡುಗಡೆಯಾಗಿರುವ ಪಟ್ಟಿ ಪ್ರಕಾರ, 37 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಮೇಲ್ವರ್ಗದ 50 ಅಭ್ಯರ್ಥಿಗಳಿಗೆ ಹಾಗೂ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.
ಈ ಬಾರಿ ಒಟ್ಟಾರೆ 97 ಮುಸ್ಲಿಂ ಅಭ್ಯರ್ಥಿಗಳಿಗೆ, 113 ಮೇಲ್ವರ್ಗದ ಹಾಗೂ 87 ದಲಿತ ಅಭ್ಯರ್ಥಿಗಳು ಸೇರಿದಂತೆ ಹಿಂದೂಳಿದ ವರ್ಗದ 106 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಬಿಎಸ್ಪಿ ನಿರ್ಧರಿಸಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


