ದೇಶ

ಜಯಾಲಲಿತಾಗೆ ಭಾರತ ರತ್ನ: ಪಿಐಎಲ್ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಾಲಲಿತಾ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ...

ಜಯಾಲಲಿತಾಗೆ ಭಾರತ ರತ್ನ: ಪಿಐಎಲ್ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಾಲಲಿತಾ
Published On :

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಾಲಲಿತಾ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಎಂ.ಸುಂದರ್ ನೇತೃತ್ವದ ಪೀಠ ಅರ್ಜಿಯನ್ನು ತಳ್ಳಿಹಾಕಿದ್ದು, ಪ್ರಶಸ್ತಿ ವಿಚಾರದಲ್ಲಿ ನ್ಯಾಯಾಲಯ ಮಧ್ಯೆಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ.

 ಮದ್ರಾಸ್ ಹೈಕೋರ್ಟ್ ನಲ್ಲಿ ಕೆ.ಕೆ. ರಮೇಶ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ಪರಿಶೀಲನೆ ನಡೆಸಿರುವ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದ್ದು, ಭಾರತ ರತ್ನ ಪ್ರಶಸ್ತಿಗಾಗಿ ಕೇಂದ್ರ ಸರ್ಕಾರ ಸಮಿಯನ್ನು ರಚನೆ ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಪ್ರಶಸ್ತಿ ವಿಚಾರದಲ್ಲಿ ನ್ಯಾಯಾಲಯ ಮಧ್ಯೆಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.

ಅರ್ಜಿದಾರ ರಮೇಶ್ ಅವರು ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಜಯಲಲಿತಾ ಅವರು ಜೀವನ ಇತಿಹಾಸದ ಸಂಪೂರ್ಣ ವಿವರವನ್ನು ನೀಡಿದ್ದರು. ತಮಿಳುನಾಡು ರಾಜ್ಯದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಜಯಲಲಿತಾ ಅವರು ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ 5 ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಧಿಕಾರದಲ್ಲಿದ್ದಾಗ ಜಯಲಲಿತಾ ಅವರು ಜನ ಪರವಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಗ್ಗದ ದರದಲ್ಲಿ ಆಹಾರ, ಉಚಿತ ಲ್ಯಾಪ್ ಟಾಪ್, ವಿದ್ಯಾರ್ಥಿಗಳಿಗೆ ಸೈಕಲ್ ಗಳಂತಹ ಯೋಜನೆಗಳನ್ನು ಜಾರಿಗೆ ತಂದಿದ್ದರು. ತಾಯಿಯಂತೆ ತಮಿಳುನಾಡನ್ನು ನೋಡಿಕೊಂಡಿದ್ದಾರೆ. ಹೀಗಾಗಿಯೇ ಅವರನ್ನು ತಮಿಳುನಾಡಿನಲ್ಲಿ 'ಅಮ್ಮ' ಎಂದೇ ಕರೆಯಲಾಗುತ್ತಿತ್ತು. ಆದ್ದರಿಂದ ಜಯಾಲಲಿತಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದು ಸೂಕ್ತ ಎಂದು ಅರ್ಜಿಯಲ್ಲಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.