ದೇಶ

ಮಸೂದ್ ಅಜರ್ ನಿಷೇಧಕ್ಕೆ ಮತ್ತೊಮ್ಮೆ ವಿಶ್ವಸಂಸ್ಥೆಗೆ ಮನವಿ ಮಾಡಲಿರುವ ಭಾರತ

ಪಾಕಿಸ್ತಾನದ ಉಗ್ರ ಸಂಘಟನೆ ಜೈಶ್-ಇ-ಮೊಹಮ್ಮದ್ ನ ಮುಖ್ಯಸ್ಥ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ವಿಚಾರದಲ್ಲಿ ಚೀನಾದ ನಿರಂತರ ಅಡಚಣೆಗಳ ಹೊರತಾಗಿಯೂ ಭಾರತ ಮತ್ತೊಮ್ಮೆ ವಿಶ್ವಸಂಸ್ಥೆಗೆ ಮನವಿ...

ಮಸೂದ್ ಅಜರ್ ನಿಷೇಧಕ್ಕೆ ಮತ್ತೊಮ್ಮೆ ವಿಶ್ವಸಂಸ್ಥೆಗೆ ಮನವಿ ಮಾಡಲಿರುವ ಭಾರತ
ವಿಶ್ವಸಂಸ್ಥೆ
Published On :
ನವದೆಹಲಿ: ಪಾಕಿಸ್ತಾನದ ಉಗ್ರ ಸಂಘಟನೆ ಜೈಶ್-ಇ-ಮೊಹಮ್ಮದ್ ನ ಮುಖ್ಯಸ್ಥ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ವಿಚಾರದಲ್ಲಿ ಚೀನಾದ ನಿರಂತರ ಅಡಚಣೆಗಳ ಹೊರತಾಗಿಯೂ ಭಾರತ ಮತ್ತೊಮ್ಮೆ ವಿಶ್ವಸಂಸ್ಥೆಗೆ ಮನವಿ ಸಲ್ಲಿಸಲು ತಯಾರಿ ನಡೆಸಿದೆ. 
ವಿಶ್ವಸಂಸ್ಥೆಗೆ ಮತ್ತೊಮ್ಮೆ ಮನವಿ ಸಲ್ಲಿಸುವ ಎಲ್ಲಾ ಆಯ್ಕೆಗಳು ಹಾಗೂ ಭಾರತದ ನಿಲುವನ್ನು ಬೆಂಬಲಿಸುವ ಎಲ್ಲಾ ಸದಸ್ಯರೊಂದಿಗೆ ಚರ್ಚಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ, ಆದರೆ ಮಸೂದ್ ಅಜರ್ ವಿಷಯವಾಗಿ ಯಾವಾಗ ವಿಶ್ವಸಂಸ್ಥೆಗೆ ಮನವಿ ಮಾಡಬೇಕೆಂಬುದು ಇನ್ನೂ ನಿರ್ಧರಿಸಿಲ್ಲ ಎಂದು ವಿದೇಶಾಂಗ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಕಳೆದ ವಾರ ಚೀನಾ ಭಾರತದ ಯತ್ನಕ್ಕೆ ಮತ್ತೊಮ್ಮೆ ಅಡಚಣೆ ಉಂಟು ಮಾಡಿ ವಿಶ್ವಸಂಸ್ಥೆಯಲ್ಲಿ ಉಗ್ರ ಮಸೂದ್ ಗೆ ನಿಷೇಧ ವಿಧಿಸುವ ವಿಚಾರದಲ್ಲಿ ಸತತ ಮೂರನೇ ಬಾರಿಗೆ ಭಾರತದ ಯತ್ನವನ್ನು ವಿಫಲಗೊಳಿಸಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.