ಉತ್ತರಪ್ರದೇಶ ಚುನಾವಣೆ: ಬಿಎಸ್'ಪಿ 100 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಇನ್ನು ಕೆಲವೇ ದಿನಗಳಲ್ಲಿ ಉತ್ತರಪ್ರದೇಶ ಚುನಾವಣೆ ಆರಂಭಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಪಕ್ಷದ 100 ಅಭ್ಯರ್ಥಿಗಳ ಎರಡನೇ...

ಲಖನೌ: ಇನ್ನು ಕೆಲವೇ ದಿನಗಳಲ್ಲಿ ಉತ್ತರಪ್ರದೇಶ ಚುನಾವಣೆ ಆರಂಭಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಪಕ್ಷದ 100 ಅಭ್ಯರ್ಥಿಗಳ ಎರಡನೇ ಮಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 11ರಿಂದ ಏಳು ಹಂತಗಳ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮಾಯಾವತಿಯವರು 403 ಅಭ್ಯರ್ಥಿಗಳ ಪೈಕಿ ನಿನ್ನೆಯಷ್ಟೇ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ಇದೀಗ 100 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 100 ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿಂದುಳಿವ ವರ್ಗದ ಜನರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದ್ದು, 27 ಸ್ಥಾನವನ್ನು ಹಿಂದುಳಿದ ವರ್ಗಗಳ ಜನರಿಗೆ ನೀಡಿದ್ದಾರೆಂದು ಹೇಳಲಾಗುತ್ತಿದೆ.
ಈ ಹಿಂದಷ್ಟೇ ಚುನಾವಣೆ ಕುರಿತಂತೆ ಹೇಳಿಕೆ ನೀಡಿದ್ದ ಮಾಯಾವತಿಯವರು, ನಮ್ಮ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿಯಾಗಲು ಅವಕಾಶ ನೀಡುವುದಿಲ್ಲ. ಪಕ್ಷ ಏಕಾಂಗಿಯಾಗಿಯೇ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದ್ದರು. ಚುನಾವಣೆಯಲ್ಲಿ 97 ಟಿಕೆಟ್ ಗಳು ಮುಸ್ಲಿಮರಿಗೆ, ಮೇಲ್ಜಾತಿ ವರ್ಗದವರಿಗೆ 113, ಹಿಂದುಳಿದವರಿಗೆ 105 ಹಾಗೂ 87 ಟಿಕೆಟ್ ಗಳನ್ನು ದಲಿತರಿಗೆ ನೀಡಲಾಗುತ್ತದೆ ಎಂದು ಹೇಳಿದ್ದರು.
ಉತ್ತರಪ್ರದೇಶದಲ್ಲಿ ಫೆಬ್ರವರಿ 11ರಿಂದ ಚುನಾವಣೆ ಆರಂಭವಾಗಲಿದ್ದು, ಮಾರ್ಚ್ 8ಕ್ಕೆ ಚುನಾವಣೆ ಮುಕ್ತಾಯಗೊಳ್ಳಲಿದೆ. ಮಾರ್ಚ್ 11 ರಂದು ಮತ ಎಣಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


