ಗುರಗಾಂವ್: ಗುಂಡಿಟ್ಟು ಮಾಜಿ ಯೋಧನ ಹತ್ಯೆ
ಮಾಜಿ ಯೋಧರೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆಯೊಂದು ಬಾದ್'ಶಾಹ್ಪುರ ಗ್ರಾಮದಲ್ಲಿ ಶನಿವಾರ ನಡೆದಿದೆ...

ಗುರಗಾಂವ್: ಮಾಜಿ ಯೋಧರೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆಯೊಂದು ಬಾದ್'ಶಾಹ್ಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಸುಭಾಷ್ (50) ಹತ್ಯೆಯಾದ ಮಾಜಿ ಯೋಧರಾಗಿದ್ದು, ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋಗಿ ಹಿಂತಿರುಗಿ ಬರುವ ವೇಳೆ ಬೈಕ್ ನಿಂದ ಬಂದಿರುವ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ತೀವ್ರವಾಗಿ ಗಾಯಗೊಂಡ ಸುಭಾಷ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದರೆ, ಅಷ್ಟರಲ್ಲಾಗಲೇ ಸುಭಾಷ್ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸುಭಾಷ್ ಅವರು ಪ್ರತೀನಿತ್ಯ ದೇವಸ್ಥಾನಕ್ಕೆ ಹೋಗುತ್ತಿದ್ದರು. ಇಂದು ಬೆಳಿಗ್ಗೆ ಕೂಡ ದೇವಸ್ಥಾನಕ್ಕೆ ಹೋಗಿ ಹಿಂತಿರುಗಿ ಬರುತ್ತಿದ್ದರು. ಸುಭಾಷ್ ಅವರ ಮನೆಯ ಹತ್ತಿರವೇ ನಿರ್ಮಾಣ ಹಂತದ ಕಟ್ಟಡವಿದ್ದು, ಕಟ್ಟಡದ ಬಳಿ ನಡೆದು ಬರುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. 6-7 ಗುಂಡುಗಳು ಸುಭಾಷ್ ಅವರ ದೇಹದೊಳಗೆ ಹೊಕ್ಕಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಹಳೆಯ ದ್ವೇಷದ ಹಿನ್ನಲೆಯಲ್ಲಿ ಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಲ್ಲಾ ರೀತಿಯಲ್ಲೂ ಪ್ರಕರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಎಸಿಪಿ ಮನೀಷ್ ಸೆಹ್ಗಾಲ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


