ದೇಶ

ಅಗಸ್ಟಾ ಹಗರಣ: ಕ್ರಿಶ್ಚಿಯನ್ ಮೈಕೆಲ್ ಗೆ ಜಾಮೀನು ರಹಿತ ವಾರೆಂಟ್, ಮೂವರಿಗೆ ಸಮನ್ಸ್

ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಬ್ರಿಟನ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಅಗಸ್ಟಾ ಹಗರಣ: ಕ್ರಿಶ್ಚಿಯನ್ ಮೈಕೆಲ್ ಗೆ ಜಾಮೀನು ರಹಿತ ವಾರೆಂಟ್, ಮೂವರಿಗೆ ಸಮನ್ಸ್
ಅಗಸ್ಟಾ ಹಗರಣ: ಕ್ರಿಶ್ಚಿಯನ್ ಮೈಕೆಲ್ ಗೆ ಜಾಮೀನು ರಹಿತ ವಾರೆಂಟ್, ಮೂವರಿಗೆ ಸಮನ್ಸ್
Published On :
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಬ್ರಿಟನ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದ್ದು, ಒಂದು ಸಂಸ್ಥೆ ಹಾಗು ಇನ್ನು ಇಬ್ಬರಿಗೆ ಸಮನ್ಸ್ ಜಾರಿ ಮಾಡಲಾಗಿದೆ. 
ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಮೈಕೆಲ್ ಜೇಮ್ಸ್ ಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದಾರೆ. ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ದೆಹಲಿ ಮೂಲದ ಮೀಡಿಯಾ ಎಕ್ಸಿಮ್ ಲಿಮಿಟೆಡ್ ಸಂಸ್ಥೆ, ಸಂಸ್ಥೆಯ ನಿರ್ದೇಶಕರಾದ ಆರ್ ಕೆ ನಂದಾ, ಮಾಜಿ ನಿರ್ದೇಶಕ ಜೆಬಿ ಸುಬ್ರಹ್ಮಣ್ಯಂ ಗೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಯಡಿ ಹಣ ಸೆಕ್ಷನ್ 45 ರ ಪ್ರಕಾರ ಸಮನ್ಸ್ ಜಾರಿ ಮಾಡಲಾಗಿದೆ. 
ಹಗರಣದ ಆರೋಪಿಗಳಿಗೆ ಫೆ.22 ರೊಳಗೆ ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಹೆಚ್ಚುವರಿ ಚಾರ್ಜ್ ಶೀಟ್ ದಾಖಲಿಸಿದ ನಂತರ ವಿಶೇಷ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದೆ. ಚಾರ್ಜ್ ಶೀಟ್ ನಲ್ಲಿ ಕ್ರಿಶ್ಚಿಯನ್ ಮೈಕೆಲ್ ಹಾಗೂ ಮೂವರ ವಿರುದ್ಧ ಆರೋಪ ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.