ದೇಶ

ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ, ಸಾಕ್ಷಿ ಮಹರಾಜ್ ವಿರುದ್ಧ ಎಫ್ಐಆರ್ ದಾಖಲು

ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರ ವಿರುದ್ಧ ಮೀರತ್ ಪೊಲೀಸರು ಶನಿವಾರ....

ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ, ಸಾಕ್ಷಿ ಮಹರಾಜ್ ವಿರುದ್ಧ ಎಫ್ಐಆರ್ ದಾಖಲು
ಸಾಕ್ಷಿ ಮಹಾರಾಜ್
Published On :
ನವದೆಹಲಿ: ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರ ವಿರುದ್ಧ ಮೀರತ್ ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ.
ದೇಶದಲ್ಲಿ ಜನಸಂಖ್ಯೆ ಏರಿಕೆಯಾಗಲು ನಾಲ್ಕು ಪತ್ನಿಯರು, 40 ಮಕ್ಖಳು ಬೇಕು ಎನ್ನುವವರೇ ಕಾರಣ ಎಂದು ಮುಸ್ಲಿಮರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಸಾಕ್ಷಿ ಮಹಾರಾಜ್ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆತಂದ ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇನ್ನು ಸಾಕ್ಷಿ ಮಹಾರಾಜ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ ಚುನಾವಣಾ ಆಯೋಗ, ಈ ಸಂಬಂಧ ಮೀರತ್ ಜಿಲ್ಲಾ ಆಡಳಿತಕ್ಕೆ ನೋಟಿಸ್ ನೀಡಿದ್ದು, ಬಿಜೆಪಿ ನಾಯಕನ ಹೇಳಿಕೆ ಬಗ್ಗೆ ವರದಿ ನೀಡುವಂತೆ ಸೂಚಿಸಿದೆ.
ದಿನದಿಂದ ದಿನಕ್ಕೆ ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಲೇ ಇದೆ. ಮಹಿಳೆಯರು ಮಕ್ಕಳನ್ನು ಹೆರುವ ಯಂತ್ರವಲ್ಲ. ನಾಲ್ವರು ಪತ್ನಿಯರು, 40 ಮಕ್ಕಳು ಹಾಗೂ ಮೂರು ವಿಚ್ಛೇದನ ಪಡೆದವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.