ಬಡವರ ಜೀವನ ಗುಣಮಟ್ಟ ಸುಧಾರಣೆ ಸರ್ಕಾರದ ಮೊದಲ ಆದ್ಯತೆ: ಪ್ರಧಾನಿ ಮೋದಿ
ಬಡವರ ಹಾಗೂ ಸೌಲಭ್ಯ ವಂಚಿತರ ಜೀವನ ಗುಣಮಟ್ಟ ಸುಧಾರಿಸುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ...

Published On :
ನವದೆಹಲಿ: ಬಡವರ ಹಾಗೂ ಸೌಲಭ್ಯ ವಂಚಿತರ ಜೀವನ ಗುಣಮಟ್ಟ ಸುಧಾರಿಸುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಹೇಳಿರುವುದಾಗಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಇಂದು ಮುಕ್ತಾಯಗೊಂಡಿದ್ದು, ಬಡವರನ್ನು ಮತ ಬ್ಯಾಂಕ್ ದೃಷ್ಟಿಯಿಂದ ನೋಡಬಾರದು. ಬಡವರ ಸೇವೆ ಮಾಡಿ, ದೇಶ ಸೇವೆ ಮಾಡಿ. ದೇಶ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ ಎಂದು ಪ್ರಧಾನಿ ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ.
ನೋಟ್ ನಿಷೇಧದ ನಂತರ ಕಠಿಣ ಪರಿಸ್ಥಿತಿಯನ್ನು ಎದುರಿಸಿದರೂ ಸರ್ಕಾರದ ನಿರ್ಧಾರವನ್ನು ಸ್ವಇಚ್ಛೆಯಿಂದ ಬೆಂಬಲಿಸಿದ ಬಡವರ ಆತ್ಮ ಶಕ್ತಿಗೆ ಪ್ರಧಾನಿ ಸಲ್ಯೂಟ್ ಮಾಡಿದ್ದಾರೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ಬ್ಯಾನ್ ಮಾಡುವ ಮೂಲಕ ಕಪ್ಪುಹಣ, ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದು, ಭವಿಷ್ಯದಲ್ಲಿ ಇದರ ಲಾಭ ದೊರೆಯಲಿದೆ ಎಂದರು. ಅಲ್ಲದೆ ರಾಜಕೀಯ ಪಕ್ಷಗಳಿಗೆ ಹರಿದುಬರುವ ಫಂಡ್ ಬಗ್ಗೆ ಪಾರದರ್ಶಕತೆ ಇರಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


