ಎರಡು ವರ್ಷಗಳ ನಂತರವೇ ನಾನು ಅಧಿಕಾರದಿಂದ ಕೆಳಗಿಳಿಯುವುದು: ಕಿರಣ್ ಬೇಡಿ
ಪುದುಚೆರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ಲೆಪ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವಿನ ಸಂಘರ್ಷ ತಾರಕಕ್ಕೇರಿದೆ. 2018ರ ಮೇ 29 ವರೆಗೆ ತಾವು ...

ಪುದುಚೆರಿ: ಪುದುಚೆರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ಲೆಪ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವಿನ ಸಂಘರ್ಷ ತಾರಕಕ್ಕೇರಿದೆ. 2018ರ ಮೇ 29 ವರೆಗೆ ತಾವು ಅಧಿಕಾರದಲ್ಲಿರುವುದಾಗಿ ಕಿರಣ್ ಬೇಡಿ ಹೇಳಿದ್ದಾರೆ.
ನನಗೆ ನಾನು ಗಡುವು ವಿಧಿಸಿಕೊಂಡಿದ್ದೇನೆ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯ ಉಪ ರಾಜ್ಯಪಾಲೆಯಾಗಿ ಅಧಿಕಾರ ವಹಿಸಿಕೊಂಡು ಮೇ 29, 2018ಕ್ಕೆ 2 ವರ್ಷ ಆಗಲಿದ್ದು, ಅಂದು ರಾಜೀನಾಮೆ ಕೊಡಲಿದ್ದೇನೆ. ಈ ವಿಷಯವನ್ನು ಹಿರಿಯರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿ ನಾರಾಯಣಸ್ವಾಮಿ ಅಧಿಕಾರಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸದಂತೆ ನಿರ್ಬಂಧ ಹೇರಿದ್ದರು. ಕಿರಣ್ ಬೇಡಿ ಈ ನಿರ್ಬಂಧವನ್ನು ತೆರವುಗೊಳಿಸಿದ್ದರು.
ಇದರಿಂದ ಸರ್ಕಾ ಮತ್ತು ಬೇಡಿ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕರು ಬೇಡಿ ಕಾರ್ಯವೈಖರಿ ವಿರುದ್ಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ರಿಗೆ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


