ಕಾವೇರಿ ವಿವಾದ: ರೂ. 2,480 ಕೋಟಿ ಪರಿಹಾರ ಕೇಳಿದ ತಮಿಳುನಾಡು
ಸುಪ್ರೀಂಕೋರ್ಟ್ ಆದೇಶ ನೀಡಿದ ಬಳಿಕವೂ ನೀರು ಬಿಡದ ಕಾರಣಕ್ಕೆ ಕರ್ನಾಟಕ ರಾಜ್ಯ ರು.2,480 ಕೋಟಿ ಹಣವನ್ನು ಪರಿಹಾರ ಹಣವನ್ನು ನೀಡಬೇಕೆಂದು ತಮಿಳುನಾಡು ಸರ್ಕಾರ ಸೋಮವಾರ ಆಗ್ರಹಿಸಿದೆ...

ಚೆನ್ನೈ: ಸುಪ್ರೀಂಕೋರ್ಟ್ ಆದೇಶ ನೀಡಿದ ಬಳಿಕವೂ ನೀರು ಬಿಡದ ಕಾರಣಕ್ಕೆ ಕರ್ನಾಟಕ ರಾಜ್ಯ ರು.2,480 ಕೋಟಿ ಹಣವನ್ನು ಪರಿಹಾರ ಹಣವನ್ನು ನೀಡಬೇಕೆಂದು ತಮಿಳುನಾಡು ಸರ್ಕಾರ ಸೋಮವಾರ ಆಗ್ರಹಿಸಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಉಭಯ ರಾಜ್ಯಗಳು 1 ವಾರದೊಳಗಾಗಿ ಸಾಕ್ಷಿಗಳ ಪಟ್ಟಿಯನ್ನು ಫೈಲ್ ಮಾಡುವಂತೆ ಆದೇಶ ನೀಡಿತ್ತು. ಅಲ್ಲದೆ, ಸಾಕ್ಷಿಗಳ ಅಫಿಡವಿಟ್ ವಿವರಗಳನ್ನು 4 ವಾರಗಳಲ್ಲಿ ಪಟ್ಟಿ ಮಾಡಬೇಕೆಂದು ತಿಳಿಸಿತ್ತು.
ಇದೇ ವೇಳೆ ಕೃಷ್ಣಾ ನ್ಯಾಯಾಧೀಕರಣದ ತೀರ್ಪನ್ನು ಪ್ರಶ್ನಿಸಿ ತೆಲಂಗಾಣ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನಿರಾಕರಿಸುವ ಸುಪ್ರೀಂ, ಕೃಷ್ಣಾ ಟ್ರಿಬ್ಯುನಲ್ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿದೆ. ಆಂಧ್ರಪ್ರದೇಶಕ್ಕೆ ಹಂಚಿಕೆಯಾದ ನೀರನ್ನೇ ಬಳಸಬೇಕಿದ್ದು ನೀರು ಮರುಹಂಚಿಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ
ಕೃಷ್ಣಾನದಿ ನೀರನ್ನು ಮರುಹಂಚಿಕೆ ಮಾಡಬೇಕೆಂದು ತೆಲಂಗಾಣ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಬಳಿ ಮನವಿಯೊಂದನ್ನು ಸಲ್ಲಿಕೆ ಮಾಡಿತ್ತು. ಆದರೆ, ಇದಕ್ಕೆ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯ ಮರುಹಂಚಿಕೆ ಅಗತ್ಯವಿಲ್ಲ ಎಂದು ಹೇಳಿತ್ತು. ಇದರಂತೆ ಇಂದು ನಡೆದ ವಿಚಾರಣೆ ವೇಳೆ ತೆಲಂಗಾಣ ಸರ್ಕಾರ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೃಷ್ಣಾ ಟ್ರಿಬ್ಯುನಲ್ ನೀಡಿರುವ ತೀರ್ಪವನ್ನು ಎತ್ತಿಹಿಡಿದಿದೆ.
ಕಾವೇರಿ ವಿವಾದ ಸಂಬಂಧ ಈ ಹಿಂದೆ ಸುಪ್ರೀಂಕೋರ್ಟ್ ನೇತೃತ್ವದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಅಮಿತವ ರಾಯ್ ಮತ್ತು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಅವರಿದ್ದ ತ್ರಿಸದಸ್ಯ ಪೀಠ ಮಧ್ಯಂತರ ಆದೇಶವನ್ನು ನೀಡಿತ್ತು. ಮುಂದಿನ ಆದೇಶದವರೆಗೂ ಕರ್ನಾಟಕ ರಾಜ್ಯ ತಮಿಳುನಾಡಿಗೆ ಪ್ರತೀನಿತ್ಯ 2 ಸಾವಿರ ಕ್ಯೂಸೆಕ್ಟ್ ನೀರನ್ನು ಬಿಡುಗಡೆ ಮಾಡುವಂತೆ ತಿಳಿಸಿತ್ತು.
ಈ ವೇಳೆ ವಾದ ಮಂಡಿಸಿದ್ದ ತಮಿಳುನಾಡು ರಾಜ್ಯ ಪರ ವಕೀಲ ಶೇಖರ್ ನಪಾಡೆ ಅವರು, ವಿವಾದ ಸಂಬಂಧ ಸತತ ವಿಚಾರಣೆ ನಡೆಸಿ ತಾರ್ಕಿಕ ಅಂತ್ಯ ಹೇಳುವಂತೆ ಸುಪ್ರೀಂ ಬಳಿ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ನ್ಯಾಯಾಲಯ ಫೆಬ್ರವರಿ 7 ರ ಬಳಿಕ ಮುಂದಿನ ಮೂರು ವಾರಗಳ ಕಾಲ ವಿವಾದ ಬಗೆಹರಿಕೆಗಾಗಿ ಪ್ರತೀ ದಿನ ಮಧ್ಯಾಹ್ನ 2 ಗಂಟೆಗೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


