ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ಒಂದು ವಾರ ಮುಂದಕ್ಕೆ, ಮಾ. 9ರಿಂದ ಆರಂಭ
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಪಠ್ಯಕ್ರಮದ 10ನೇ ಮತ್ತು 12ನೇ ತರಗತಿ ಪರೀಕ್ಷೆಗಳು...

Published On :
ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಪಠ್ಯಕ್ರಮದ 10ನೇ ಮತ್ತು 12ನೇ ತರಗತಿ ಪರೀಕ್ಷೆಗಳು ಒಂದು ವಾರಗಳ ಕಾಲ ಮುಂದೂಡಿಕೆಯಾಗಿದ್ದು, ಮಾರ್ಚ್ 9ರಿಂದ ಪರೀಕ್ಷೆಗಳು ಆರಂಭವಾಗಲಿವೆ.
ಉತ್ತರಪ್ರದೇಶ, ಗೋವಾ, ಉತ್ತರಾಖಂಡ್, ರಾಜಸ್ಥಾನ ಹಾಗೂ ಮಣಿಪುರ ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮಾರ್ಚ್ 9ರಿಂದ ಏಪ್ರಿಲ್ 29ರವರೆಗೆ ಪರೀಕ್ಷೆಗಳು ನಡೆಯಲಿವೆ.
ಸಾಮಾನ್ಯವಾಗಿ ಮಾರ್ಚ್ ಮೊದಲ ವಾರದಲ್ಲಿ ಪರೀಕ್ಷೆಗಳು ಆರಂಭವಾಗುತ್ತಿದ್ದವು. ಆದರೆ, ಈ ವರ್ಷ ಪಂಚ ರಾಜ್ಯಗಳ ಚುನಾವಣೆ ಇರುವುದರಿಂದ ಮಾರ್ಚ್ 9ರಿಂದ ಪರೀಕ್ಷೆಗಳು ನಡೆಯಲಿವೆ ಎಂದು ಸಿಬಿಎಸ್‌ಇ ಅಧ್ಯಕ್ಷ ಆರ್.ಕೆ. ಚತುರ್ವೇದಿ ಅವರು ತಿಳಿಸಿದ್ದಾರೆ.
ಫಲಿತಾಂಶ ಪ್ರಕಟಿಸುವಲ್ಲಿ ವಿಳಂಬ ಮಾಡುವುದಿಲ್ಲ. ಪರೀಕ್ಷಾ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಲಾಗುವುದು ಎಂದು ಚತುರ್ವೇದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


