ಕೇರಳ ಸಿಎಂ ಕಠಿಣ ನಿಲುವು: ಪ್ರತಿಭಟನೆ ಕೈಬಿಟ್ಟ ಐಎಎಸ್ ಅಧಿಕಾರಿಗಳು
ಕೇರಳ ಐಎಎಸ್ ಅಧಿಕಾರಿಗಳು ಕೈಗೊಂಡಿದ್ದ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದಾರೆ. ಸಿಎಂ ಪಿನರಾಯಿ ವಿಜಯನ್ ಪ್ರತಿಭಟನೆ ವಿರುದ್ಧ ತೀವ್ರ ...

ತಿರುವನಂತಪುರ: ಕೇರಳ ಐಎಎಸ್ ಅಧಿಕಾರಿಗಳು ಕೈಗೊಂಡಿದ್ದ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದಾರೆ. ಸಿಎಂ ಪಿನರಾಯಿ ವಿಜಯನ್ ಪ್ರತಿಭಟನೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪೌಲ್ ಆಂಟೋನಿ ವಿರುದ್ಧ ನಡೆಸುತ್ತಿರುವ ತನಿಖೆಗೆ ವಿರೋಧ ವ್ಯಕ್ತ ಪಡಿಸಿ ಕೇರಳ ಐಎಐಎಸ್ ಅಧಿಕಾರಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಸಿಎಂ ಪಿನರಾಯಿ ಆಕ್ರೋಶಕ್ಕೆ ಗುರಿಯಾಗಬಹುದೆಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ನಂತರ ಪ್ರತಿಭಟನೆ ಹಿಂಪಡೆದಿದ್ದಾರೆ.
ನೇಮಕಾತಿ ಹಗರಣದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪೌಲ್ ಆಂಟೋನಿ ವಿರುದ್ಧ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಚಕ್ಷಣಾ ದಳದ ನಿರ್ದೇಶಕ ಜಾಕೋಬ್ ಥಾಮಸ್ ಅಂಟೋನಿ ವಿರುದ್ಧ ತನಿಖೆ ನಡೆಸಿದ್ದರು,. ಇದಕ್ಕೆ ಐಎಎಸ್ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಪಿರನಾಯಿ ವಿಜಯನ್, ತನಿಖೆ ವಿಷಯದಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ, ಅಧಿಕಾರಿಗಳು ತನಿಖೆಗೆ ವಿರೋಧ ವ್ಯಕ್ತ ಪಡಿಸುವುದು ಸ್ವಾಭಾವಿಕ, ಈ ಹಿಂದೆಯೂ ಕೂಡ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧ ತನಿಖೆ ನಡೆದಿದೆ. ವಿಚಾರಣೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ವಿಚಾರದಲ್ಲಿ ತಲೆ ಹಾಕುವುದಿಲ್ಲ, ಜಾಕೋಬ್ ಥಾಮಸ್ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


