ಸೈಕಲ್ ಚಿಹ್ನೆಗೆ ಕಾದಾಟ: ಚುನಾವಣಾ ಆಯೋಗಕ್ಕೆ ಮುಲಾಯಂ, ಅಮರ್ ಸಿಂಗ್ ಮನವಿ
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಆಪ್ತರಾಜ ಶಿವಪಾಲ್ ಯಾದವ್ ಹಾಗೂ ಅಮರ್ ಸಿಂಗ್ ಇಂದು ಚುನಾವಣಾ...

ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಆಪ್ತರಾಜ ಶಿವಪಾಲ್ ಯಾದವ್ ಹಾಗೂ ಅಮರ್ ಸಿಂಗ್ ಇಂದು ಚುನಾವಣಾ ಆಯೋಗಕ್ಕೆ ಭೇಟಿ ನೀಡಿ ಪಕ್ಷದ ಚಿಹ್ನೆಯಾದ ಸೈಕಲ್ ಗುರುತನ್ನು ತಮಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಮುಲಾಯಂ ಸಿಂಗ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ತೆಗೆದು ಅವರಿಗೆ ಮಾರ್ಗದರ್ಶಕ ಎಂಬ ಹುದ್ದೆ ನೀಡಿ, ತಮ್ಮನ್ನು ಪಕ್ಷ ರಾಷ್ಟ್ರೀಯ ಅಧ್ಯಕ್ಷ ಎಂದು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಜನವರಿ 1 ರಂದು ಘೋಷಿಸಿಕೊಂಡಿದ್ದರು.
ಎರಡು ಬಣದವರು ಸೈಕಲ್ ಚಿಹ್ನೆಯನ್ನು ತಮಗೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ರಾಜ್ಯಸಭೆ ಸದಸ್ಯ ರಾಮ್ ಪಾಲ್ ಯಾದವ್ , ಶಾಸಕರು ಹಾಗೂ ಸಚಿವರು, ಸಂಸದರು ಸೇರಿ ಒಟ್ಟು 5,761 ಮುಖಂಡರ ಬೆಂಬಲವಿದೆ ಎಂದು ಚುನಾವಣಾ ಆಯೋಗಕ್ಕೆ ಪ್ರಮಾಣ ಪತ್ರ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ಆಯೋಗ ಭೇಟಿ ಮಾಡಿದ ಮುಲಾಯಂ ಸಿಂಗ್ ಯಾದವ್ ಬಣ ತಮಗೆ ಸೈಕಲ್ ಚಿಹ್ನೆ ನೀಡಬೇಕೆಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


