ದೇಶ

ಭದ್ರತಾ ಪಡೆಗಳ ಕ್ಷೇಮ ಸರ್ಕಾರದ ಆದ್ಯತೆ: ಕಿರಣ್ ರಿಜಿಜು

ದೇಶ ಗಡಿ ಕಾಯುವ ಯೋಧರ ಕ್ಷೇಮ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ...

ಭದ್ರತಾ ಪಡೆಗಳ ಕ್ಷೇಮ ಸರ್ಕಾರದ ಆದ್ಯತೆ: ಕಿರಣ್ ರಿಜಿಜು
ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು
Published On :

ನವದೆಹಲಿ; ದೇಶ ಗಡಿ ಕಾಯುವ ಯೋಧರ ಕ್ಷೇಮ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ಹೇಳಿದ್ದಾರೆ.

ಗಡಿಯಲ್ಲಿ ಯೋಧರು ಎದುರಿಸುತ್ತಿರುವ ಪರಿಸ್ಥಿತಿ ಕುರಿತಂತೆ ಯೋಧನೊಬ್ಬ ಹೃದಯ ವಿದ್ರಾವಕ ವಿಡಿಯೋವೊಂದನ್ನು ಜನತೆಯೊಂದಿಗೆ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದೇಶದ ಗಡಿ ಕಾಯುವ ಯೋಧರ ಕ್ಷೇಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ವಿಚಾರದಲ್ಲಿ ಯಾವುದೇ ಅಸಂಬದ್ಧತೆಗಳು ಕಂಡು ಬಂದರೂ ಸೂಕ್ತ ರೀತಿಯಲ್ಲಿ ವ್ಯವಹರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆ ಗಡಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಇಂತಹ ಯಾವುದೇ ಪರಿಸ್ಥಿತಿಗಳು ಕಂಡುಬಂದಿರಲಿಲ್ಲ. ಎಲ್ಲವೂ ಸಾಮಾನ್ಯವಾಗಿಯೇ ಇತ್ತು ಅವರು ರಿಜಿಜು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.