ದೇಶ

ಪಂಜಾಬ್ ನಲ್ಲಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್?

ಪಂಜಾಬ್ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಉಪ ಮುಖ್ಯಮಂತ್ರಿ....

ಪಂಜಾಬ್ ನಲ್ಲಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್?
ಅರವಿಂದ್ ಕೇಜ್ರಿವಾಲ್
Published On :
ಮೊಹಾಲಿ: ಪಂಜಾಬ್ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಮಂಗಳವಾರ ನೀಡಿದ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ.
ಇಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಸಿಸೋಡಿಯಾ, ಅರವಿಂದ್ ಕೇಜ್ರಿವಾಲ್ ಅವರೇ ಪಂಜಾಬ್ ಮುಂದಿನ ಮುಖ್ಯಮಂತ್ರಿ ಎಂದು ಭಾವಿಸಿ ಎಎಪಿಗೆ ಮತ ಹಾಕಿ ಎಂದು ಪಂಜಾಬ್ ಜನತೆಗೆ ಮನವಿ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರೇ ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದುಕೊಂಡು ಮತ ಹಾಕಿ ಎಂದು ದೆಹಲಿ ಉಪ ಮುಖ್ಯಮಂತ್ರಿ ಮತದಾರರಿಗೆ ಮನವಿ ಮಾಡಿದ್ದಾರೆ.
ಸಿಸೋಡಿಯಾ ಅವರ ಈ ಹೇಳಿಕೆ ರಾಜಕೀಯ ವಲದಯದಲ್ಲಿ ಸಂಚಲನ ಮೂಡಿಸಿದ್ದು, ಕೇಂಜ್ರಿವಾಲ್ ಅವರು ಪಂಜಾಬ್ ಗಾಗಿ ದೆಹಲಿಯನ್ನು ತೊರೆಯಲಿದ್ದಾರೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಇದರ ಬೆನ್ನೆಲ್ಲೇ ಸಾಮಾಜಿಕ ತಾಣದಲ್ಲಿ ಕೇಜ್ರಿವಾಲ್ ಅವರು ಪಂಜಾಬ್ ಗೆ ಸ್ಥಳಾಂತರಗೊಳ್ಳುತ್ತಿದ್ದು, ಮನಿಶ್ ಸಿಸೋಡಿಯಾ ಅವರು ದೆಹಲಿಯ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.