ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಜ.11 ರಿಂದ ಕಾಂಗ್ರೆಸ್ ರಾಷ್ಟ್ರೀಯ ಸಮಾವೇಶ
ನೋಟು ನಿಷೇಧದ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಉಂಟಾದ ಸಮಸ್ಯೆಗಳಿಗೆ ಧ್ವನಿಯಾಗುವುದಕ್ಕಾಗಿ ಕಾಂಗ್ರೆಸ್ ನವದೆಹಲಿಯ ತಾಲ್ಕಟೋರಾ ಸ್ಟೇಡಿಯಂ ನಲ್ಲಿ ಜನವೇದನೆ( ಜನ್ ವೇದ್ನಾ) ಸಮಾವೇಶ ಹಮ್ಮಿಕೊಂಡಿದೆ

Published On :
ನವದೆಹಲಿ: ನೋಟು ನಿಷೇಧದ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಉಂಟಾದ ಸಮಸ್ಯೆಗಳಿಗೆ ಧ್ವನಿಯಾಗುವುದಕ್ಕಾಗಿ ಕಾಂಗ್ರೆಸ್ ನವದೆಹಲಿಯ ತಾಲ್ಕಟೋರಾ ಸ್ಟೇಡಿಯಂ ನಲ್ಲಿ ಜನವೇದನೆ( ಜನ್ ವೇದ್ನಾ) ಸಮಾವೇಶ ಹಮ್ಮಿಕೊಂಡಿದ್ದು, ರಾಹುಲ್ ಗಾಂಧಿ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳಿಗ್ಗೆ 10 ರಿಂದ 4 ರ ವರೆಗೆ ತಾಲ್ಕಟೋರಾ ಶ್ಟೇಡಿಯಂ ನಲ್ಲಿ ಸಮಾವೇಶನ ನಡೆಯಲಿದ್ದು, ನೋಟು ನಿಷೇಧದ ವಿರುದ್ಧದ ಪ್ರತಿಭಟನೆಯನ್ನು ಮುನ್ನಡೆಸಿದ್ದ ರಾಹುಲ್ ಗಾಂಧಿಯೇ ಅಧಿವೇಶನಕ್ಕೂ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಂಗ್ರೆಸ್ ನ ವಕ್ತಾರ ಶಕ್ತಿಸಿನ್ಹಾ ಗೋಹಿಲ್ ತಿಳಿಸಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ರಾಹುಲ್ ಗಾಂಧಿ ಪಕ್ಷದ ಸ್ಥಪನಾ ದಿನದಂದು ನಡೆದ ಕಾರ್ಯಕ್ರಮಕ್ಕೂ ಅಧ್ಯಕ್ಷತೆ ವಹಿಸಿದ್ದರು.
ರಾಹುಲ್ ಗಾಂಧಿ ಅವರು ಶೀಘ್ರವೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳಿದ್ದು ಜ.11 ರಂದು ನಡೆಯುತ್ತಿರುವ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸುತ್ತಿರುವುದು ಇದಕ್ಕೆ ಪೂರಕವಾಗಿದೆ.
" ರಾಹುಲ್ ಗಾಂಧಿ ಅತ್ಯುತ್ತಮ ನಾಯಕರಾಗಿದ್ದು, ಎಂದಿಗೂ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ನೋಟು ನಿಷೇಧದಿಂದ ಜನಸಾಮಾನ್ಯರಿಗೆ ಉಂಟಾದ ಸಂಕಷ್ಟಗಳನ್ನು ಚರ್ಚಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಕ್ತಿಸಿನ್ಹಾ ಗೋಹಿಲ್ ತಿಳಿಸಿದ್ದಾರೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rahul Gandhiರಾಹುಲ್ ಗಾಂಧಿdemonetizationನೋಟು ನಿಷೇಧCongress national conventionಕಾಂಗ್ರೆಸ್ ರಾಷ್ಟ್ರೀಯ ಸಮಾವೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


