ಪಂಜಾಬ್ ವಿಧಾನಸಭೆ ಚುನಾವಣೆ: ಬಿಜೆಪಿಯ 17 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮುಂದಿನ ತಿಂಗಳು ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ....

Published On :
ನವದೆಹಲಿ/ಚಂಡಿಘಡ: ಮುಂದಿನ ತಿಂಗಳು ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಗುರುವಾರ 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.
ಇಂದು ದೆಹಲಿಯಲ್ಲಿ ನಡೆದ ಬಿಜೆಪಿಯ ಸಂಸದೀಯ ಮಂಡಳಿಯ ಸಭೆಯ ನಂತರ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಬಿಜೆಪಿ ಪಂಜಾಬ್ ನ 23 ವಿಧಾಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಉಳಿದ ಆರು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ದಿನೇಶ್ ಸಿಂಗ್ ಬಾಬು, ಅಶ್ವಿನಿ ಶರ್ಮಾ, ಬಿ.ಡಿ.ದುಪ್ಪಾರ್ ಸೀಮಾ ಕುಮಾರಿ, ಅರುಣೇಶ್ ಕುಮಾರ್ ಸುಖಜೀತ್ ಕೌರ್ ಶಾಹಿ ಹಾಗೂ ಕೆ.ಡಿ.ಬಂಡಾರಿ ಸೇರಿದಂತೆ 17 ಮಂದಿ ಬಿಜೆಪಿಯ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
117 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್ ವಿಧಾನಸಭೆಗೆ ಫೆಬ್ರುವರಿ 4 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


