ದೇಶ

ಭಾರತೀಯ ಯುದ್ಧನೌಕೆ ಐಎನ್ಎಸ್ ಪ್ರಳಯದಲ್ಲಿ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ

ಭಾರತದ ಅತ್ಯಾಧುನಿಕ ಯುದ್ಧ ನೌಕೆ ಐಎನ್ಎಸ್ ಪ್ರಳಯದಲ್ಲಿ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಯೋಧರಿಗೆ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಭಾರತೀಯ ಯುದ್ಧನೌಕೆ ಐಎನ್ಎಸ್ ಪ್ರಳಯದಲ್ಲಿ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ
ಐಎನ್ಎಸ್ ಪ್ರಳಯ (ಸಂಗ್ರಹ ಚಿತ್ರ)
Published On :

ಮುಂಬೈ: ಭಾರತದ ಅತ್ಯಾಧುನಿಕ ಯುದ್ಧ ನೌಕೆ ಐಎನ್ಎಸ್ ಪ್ರಳಯದಲ್ಲಿ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಯೋಧರಿಗೆ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ನೌಕೆಯ ಗಿರೋ ಕಂಪಾರ್ಟ್ ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಅವಘಡದ ಮುನ್ಸೂಚನೆ ದೊರೆಯುತ್ತಿದ್ದಂತೆಯೇ ಅದನ್ನು ಸಿಬ್ಬಂದಿಗಳು ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲವಾದರೂ,  ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ವಿರಬಹುದು ಎಂದು ಹೇಳಲಾಗುತ್ತಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸೇನಾಧಿಕಾರಿಗಳು, ವಿಚಾರಣೆ ನಡೆಸುತ್ತಿದ್ದಾರೆ. ಐಎನ್ಎಸ್ ಪ್ರಳಯ 2002ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.