ತಮಿಳುನಾಡಿನಲ್ಲಿ ಈ ವರ್ಷವೂ ಜಲ್ಲಿಕಟ್ಟು ಇಲ್ಲ: ಸಂಕ್ರಾಂತಿಗೆ ಮುನ್ನ ತೀರ್ಪು ನೀಡಲು 'ಸುಪ್ರೀಂ' ನಕಾರ
ಸಂಕ್ರಾಂತಿ ಸುಗ್ಗಿಯ ಸಂದರ್ಭದಲ್ಲಿ ತಮಿಳುನಾಡಿನ ಪ್ರಮುಖ ಆಚರಣೆಯಾದ ಗೂಳಿ ಓಡಿಸುವ...

Published On :
ನವದೆಹಲಿ: ಸಂಕ್ರಾಂತಿ ಸುಗ್ಗಿಯ ಸಂದರ್ಭದಲ್ಲಿ ತಮಿಳುನಾಡಿನ ಪ್ರಮುಖ ಆಚರಣೆಯಾದ ಗೂಳಿ ಓಡಿಸುವ ಆಟ ಜಲ್ಲಿಕಟ್ಟಿಗೆ ಅವಕಾಶ ನೀಡಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿ ಹಾಕಿದೆ.
ನ್ಯಾಯಾಲಯ ಮಧ್ಯೆ ಪ್ರವೇಶಿಸಿ ಜಲ್ಲಿಕಟ್ಟು ಆಚರಣೆಗೆ ಅನುವು ಮಾಡಿಕೊಡಬೇಕೆಂಬ ಮನವಿಯನ್ನು ಇಂದು ತಿರಸ್ಕರಿಸಿರುವ ನ್ಯಾಯಾಲಯ, 'ಈ ಕುರಿತು ಕರಡನ್ನು ರಚಿಸಲಾಗಿದೆ. ಆದರೆ ಶನಿವಾರದೊಳಗೆ ತೀರ್ಪು ನೀಡಲು ಸಾಧ್ಯವಿಲ್ಲವೆಂದು' ಹೇಳಿದೆ. ಅಲ್ಲದೆ ಜಲ್ಲಿಕಟ್ಟಿಗೆ ಸಂಬಂಧಿಸಿದಂತೆ ನ್ಯಾಯಪೀಠ ಆದೇಶ ಹೊರಡಿಸುವುದು ಸಮಂಜಸವಲ್ಲ ಎಂದು ಕೂಡ ಹೇಳಿದೆ. ಇದರಿಂದಾಗಿ ತಮಿಳುನಾಡಿನಲ್ಲಿ ಈ ವರ್ಷ ಸಂಕ್ರಾಂತಿಗೆ ಜಲ್ಲಿಕಟ್ಟು ನಡೆಯುವುದು ಸಂಶಯವಾಗಿದೆ.
ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ತಮಿಳಿಸೈ ಸೌಂದರಾಜನ್ ಅವರು, ಪೊಂಗಲ್ ಗೆ ಮೊದಲು ಸುಪ್ರೀಂ ಕೋರ್ಟ್ ತೀರ್ಪು ನೀಡಲು ನಿರಾಕರಿಸಿರುವುದಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ಜಲ್ಲಿಕಟ್ಟನ್ನು ನಿಷೇಧಿಸಿರುವುದರಿಂದ ಕಳೆದ ಎರಡು ವರ್ಷಗಳಿಂದ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಆಚರಣೆ ತಾತ್ಕಾಲಿಕವಾಗಿ ನಿಂತಿದೆ. ಪ್ರಾಣಿಗಳಿಗೆ ತೀವ್ರ ಹಿಂಸೆಯಾಗುತ್ತದೆ ಎಂದು ಪ್ರಾಣಿದಯಾ ಸಂಘಗಳು ವಿರೋಧಿಸಿ ಅರ್ಜಿ ಹಾಕಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


