ಯಾವ ದೇಶದಲ್ಲೂ ಇಲ್ಲದ ಮಾನವ ಸಂಪನ್ಮೂಲ ಭಾರತದಲ್ಲಿದೆ: ಕೆ.ಟಿ. ರಾಮ ರಾವ್
ವಿಶ್ವದಲ್ಲಿ ಯಾವ ದೇಶದಲ್ಲೂ ಇಲ್ಲದ ಮಾನವ ಸಂಪನ್ಮೂಲ ಇಂದು ಭಾರತದಲ್ಲಿದೆ ಎಂದು ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮ ರಾವ್ ಅವರು ಗುರುವಾರ...

ಹೈದರಾಬಾದ್: ವಿಶ್ವದಲ್ಲಿ ಯಾವ ದೇಶದಲ್ಲೂ ಇಲ್ಲದ ಮಾನವ ಸಂಪನ್ಮೂಲ ಇಂದು ಭಾರತದಲ್ಲಿದೆ ಎಂದು ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮ ರಾವ್ ಅವರು ಗುರುವಾರ ಹೇಳಿದ್ದಾರೆ.
ಹೈದರಾಬಾದ್ ನ ರಾಮ ಕೃಷ್ಣ ಮಠದಲ್ಲಿ ಆಯೋಜನೆ ಮಾಡಿದ್ದ ರಾಷ್ಟ್ರೀಯ ಯುವಕರ ದಿನ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಈ ಹಿಂದೆ ಜನಸಂಖ್ಯಾ ಸ್ಫೋಟವನ್ನು ದೇಶದ ದೊಡ್ಡ ಸಮಸ್ಯೆಯೆಂದು ಹೇಳಲಾಗುತ್ತಿತ್ತು. ಆದರೆ, ಇಂದು ಆ ಜನಸಂಖ್ಯಾ ಸ್ಫೋಟವನ್ನೇ ದೇಶದ ವರ ಎಂದು ನೋಡುಲಾಗುತ್ತಿದೆ ಎಂದು ಹೇಳಿದ್ದಾರೆ.
ದೇಶದಲ್ಲಿರುವ ಶೇ.50 ರಷ್ಟು ಜನಸಂಖ್ಯೆಯಲ್ಲಿ 29 ಮತ್ತು 35 ವಯಸ್ಸಿನ ಅಂತರದಲ್ಲಿರುವ ಜನರೇ ಹೆಚ್ಚಾಗಿದ್ದು, ದೇಶದಲ್ಲಿ ಇಂದು ಶೇ.65 ರಷ್ಟು ಯುವಕರಿದ್ದಾರೆ. ಈ ಹಿಂದೆ ಜನಸಂಖ್ಯೆಯನ್ನೇ ದೇಶದ ದೊಡ್ಡ ಸಮಸ್ಯೆಯಾಗಿ ನೋಡಲಾಗುತ್ತಿತ್ತು. ಆದರೆ, ಇಂದು ಆ ಪರಿಸ್ಥಿತಿ ಬದಲಾಗಿದೆ. ಇದೀಗ ಅದೇ ಜನಸಂಖ್ಯೆಯನ್ನು ವರವಾಗಿ ನೋಡಲಾಗುತ್ತಿದೆ. ಇಡೀ ವಿಶ್ವದಲ್ಲಿಯೇ ಯಾವ ದೇಶದಲ್ಲೂ ಇರದ ಮಾನವ ಸಂಪನ್ಮೂಲವನ್ನು ಭಾರತ ಹೊಂದಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


