ದೇಶ

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು

ರಾಜಕೀಯ ಪಕ್ಷಗಳು ಜಾತಿ ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು
ರಾಹುಲ್ ಗಾಂಧಿ
Published On :
ಲಖನೌ: ರಾಜಕೀಯ ಪಕ್ಷಗಳು ಜಾತಿ ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 
ಕಾಂಗ್ರೆಸ್ ಪಕ್ಷ ನವದೆಯಲಿಯಲ್ಲಿ ಹಮ್ಮಿಕೊಂಡಿದ್ದ ಜನವೇದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಪಕ್ಷದ ಚಿನ್ಹೆಯನ್ನು ಧಾರ್ಮಿಕ ಪ್ರವರ್ತಕರು ಹಾಗೂ ದೇವರ ಕೈಗೆ ಹೋಲಿಕೆ ಮಾಡಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯ ನಂದನ್ ಸಿಂಗ್ ನೇತೃತ್ವದ ನಿಯೋಗ ಲಖನೌ ನಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದೆ. 
ಸುಪ್ರೀಂ ಕೋಟ್ ಆದೇಶವನ್ನು ಉಲ್ಲಂಘನೆ ಮಾಡುವುದರೊಂದಿಗೆ ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(3) ನ್ನೂ ಸಹ ರಾಹುಲ್ ಗಾಂಧಿ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.