ದೇಶದ ಜನತೆಗೆ ಮಕರ ಸಂಕ್ರಾಂತಿ, ಪೊಂಗಲ್ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶದಾದ್ಯಂತ ಮಕರ ಸಂಕ್ರಾಂತಿ, ಪೊಂಗಲ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು...

ನವದೆಹಲಿ: ದೇಶದಾದ್ಯಂತ ಮಕರ ಸಂಕ್ರಾಂತಿ, ಪೊಂಗಲ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟರ್ ನಲ್ಲಿ ಶುಭಾಶಯಗಳನ್ನು ಕೋರಿರುವ ಪ್ರಧಾನಿ ಮೋದಿಯವರು, ಇಂದು ಭಾರತದಾದ್ಯಂತ ಜನರು ವಿವಿಧ ರೀತಿಯ ಹಬ್ಬಗಳನ್ನು ಆಚರಿಸುತ್ತಿದ್ದು, ಹಬ್ಬದ ಸಂಭ್ರದಲ್ಲಿರುವ ಜನತೆಗೆ ಈ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.
ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ಈ ಬಾರಿಯ ಹಬ್ಬ ನಿಮ್ಮೆಲ್ಲರಿಗೂ ಸಂತೋಷ ಹಾಗೂ ಐಶ್ವರ್ಯವನ್ನು ನೀಡಲಿ ಎಂದು ತಿಳಿಸಿದ್ದಾರೆ.
ತಮಿಳುನಾಡಿನ ಸ್ನೇಹಿತರು ಪೊಂಗಲ್ ಹಬ್ಬವನ್ನು ಆಚರಿಸುತ್ತಿದ್ದು, ಈ ಮೂಲಕ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.
ಅಸ್ಸಾಂ ರಾಜ್ಯದಲ್ಲಿ 'ಮಾಘ ಬಿಹು' ಹಬ್ಬವನ್ನು ಆಚರಿಸಲಾಗುತ್ತಿದ್ದು, ಅಸ್ಸಾಂ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ.
ಈ ಎಲ್ಲಾ ಹಬ್ಬಗಳಲ್ಲದೆ, ಭಾರತದ ಇನ್ನಿತರೆ ಪ್ರದೇಶಗಳಲ್ಲೂ ವಿವಿಧ ಹಬ್ಬಗಳನ್ನು ಆಚರಿಸಲಾಗಿತ್ತಿದ್ದು, ಈ ಬಾರಿಯ ಹಬ್ಬ ಎಲ್ಲರ ಜೀವನದಲ್ಲೂ ಬಣ್ಣ ಹಾಗೂ ಸಂತೋಷವನ್ನು ನೀಡಲಿ. ಭಾರತದಲ್ಲಿರುವ ವೈವಿಧ್ಯತೆಯೇ ದೊಡ್ಡ ಶಕ್ತಿಯಾಗಿದೆ. ಈ ಬಾರಿಯ ಹಬ್ಬ ಶ್ರಮದಾಯಕ ರೈತರಿಗೆ ಸಂತೋಷ ಹಾಗೂ ಐಶ್ವರ್ಯವನ್ನು ನೀಡಲಿ ಎಂದು ಶುಭಾಶಯ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


