ದೇಶ

ಬಿಹಾರ ದೋಣಿ ದುರಂತ: ನಿರ್ವಾಹಕನ ವಿರುದ್ಧ ಎಫ್ ಐಆರ್ ದಾಖಲು

ಬಿಹಾರದ ಪಾಟ್ನಾದಲ್ಲಿ ಗಂಗಾ ನದಿಯಲ್ಲಿ ದೋಣಿ ಮಗುಚಿ 24 ಜನರು ಮೃತಪಟ್ಟ ಘಟನೆಗೆ...

ಬಿಹಾರ ದೋಣಿ ದುರಂತ: ನಿರ್ವಾಹಕನ ವಿರುದ್ಧ ಎಫ್ ಐಆರ್ ದಾಖಲು
ರಕ್ಷಣಾ ಕಾರ್ಯದಲ್ಲಿ ನಿರತವಾಗಿರುವ ತಂಡ
Published On :
ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಗಂಗಾ ನದಿಯಲ್ಲಿ ದೋಣಿ ಮಗುಚಿ 24 ಜನರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ದೋಣಿಯ ನಿರ್ವಾಹಕರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ದುರ್ಘಟನೆ ನಡೆದ ಸಂದರ್ಭದಲ್ಲಿ ನಿರ್ವಾಹಕರು ಕೂಡ ದೋಣಿಯಲ್ಲಿದ್ದರು. ಅದೃಷ್ಟವಶಾತ್ ಬದುಕುಳಿದಿದ್ದಾರೆ.
ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ಹೊತ್ತು ನದಿಯಲ್ಲಿ ದೋಣಿ ನಡೆಸಿದ್ದಕ್ಕಾಗಿ ನಿರ್ವಾಹಕರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಗಾಳಿಪಟ ಉತ್ಸವ ಮುಗಿಸಿಕೊಂಡು ವಾಪಸಾಗುತ್ತಿದ್ದವರನ್ನು ಹೇರಿಕೊಂಡು ದೋಣಿ ಸಾಗುತ್ತಿತ್ತು. ಅದರಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿದ್ದರು ಎಂದು ತೀರದಲ್ಲಿ ನಿಂತು ಫೋಟೋ ತೆಗೆದಿದ್ದವರ ಛಾಯಾಚಿತ್ರ ಹೇಳುತ್ತದೆ.
ದೋಣಿಯಲ್ಲಿ ಸುಮಾರು 40 ಜನರಿದ್ದು ಅವರಲ್ಲಿ 24 ಮಂದಿ ಈಗಾಗಲೇ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.