ದೇಶ

ಆರ್ ಎಸ್ಎಸ್ ಯಾರ ವಿರುದ್ಧವೂ ಇಲ್ಲ, ಹಿಂದೂಸಂಘಟನೆ ಬಲವರ್ಧನೆಗೆ ಕೆಲಸ ಮಾಡುತ್ತಿದೆ: ಮೋಹನ್ ಭಾಗವತ್

ಕೋಲ್ಕತಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ(ಆರ್ ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಆರ್ ಎಸ್ಎಸ್ ಯಾರ ವಿರುದ್ಧವೂ ಇಲ್ಲ.

ಆರ್ ಎಸ್ಎಸ್ ಯಾರ ವಿರುದ್ಧವೂ ಇಲ್ಲ, ಹಿಂದೂಸಂಘಟನೆ ಬಲವರ್ಧನೆಗೆ ಕೆಲಸ ಮಾಡುತ್ತಿದೆ: ಮೋಹನ್ ಭಾಗವತ್
ಮೋಹನ್ ಭಾಗವತ್
Published On :
ಕೋಲ್ಕತಾ: ಕೋಲ್ಕತಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ(ಆರ್ ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಆರ್ ಎಸ್ಎಸ್ ಯಾರ ವಿರುದ್ಧವೂ ಇಲ್ಲ. ಹಿಂದೂ ಸಮುದಾಯದ ಬಲವರ್ಧನೆಗಾಗಿ ಕೆಲಸ ಮಾಡುತ್ತಿರುವ ಸಂಘಟನೆಯಷ್ಟೇ ಎಂದು ಹೇಳಿದ್ದಾರೆ. 
ಹಿಂದೂಗಳ ಒಗ್ಗಟ್ಟಿಗಾಗಿ ಕೆಲಸ ಮಾಡುತ್ತಿರುವ ನಮ್ಮನ್ನು ಯಾರಿಂದಾದರೂ ತಡೆಯಲು ಸಾಧ್ಯವೆ? ಖಂಡಿತ ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ನಾವು ನಮ್ಮ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುತ್ತೇವೆ. ಕ್ರಿಯಾಶೀಲತೆಯನ್ನು ಹೆಚ್ಚಿಸಿ, ಆಗ ಉಪದೇಶಗಳು ಹೆಚ್ಚುವುದಕ್ಕೆ ಸಾಧ್ಯವಿಲ್ಲ ಎಂದು ಮೋಹನ್ ಭಾಗವತ್ ಮಕರ ಸಂಕ್ರಾಂತಿಯ ಸಂದೇಶದಲ್ಲಿ ಕರೆ ನೀಡಿದ್ದಾರೆ. 
ಕೋಲ್ಕತಾದಲ್ಲಿ ಆರ್ ಎಸ್ಎಸ್ ನ ಸಮಾವೇಶ ನಡೆಯುವುದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ವಿರೋಧಿಸಿತ್ತು. ಆದರೆ ಅಲ್ಲಿನ ಹೈಕೋರ್ಟ್ ಆರ್ ಎಸ್ಎಸ್ ರ್ಯಾಲಿಗೆ ಅನುಮತಿ ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.