ಪತಿಯ ಬಳಿ ಕೆಲಸ ಮಾಡುವ ಉದ್ಯೋಗಿಯಿಂದ ಪತ್ನಿ ಮೇಲೆ ಅತ್ಯಾಚಾರ
ಗಂಡನ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಯೊಬ್ಬ ಮಾಲೀಕನ ಪತ್ನಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ದೆಹಲಿಯ ಚಾವ್ಲಾ ಪ್ರದೇಶದಲ್ಲಿ ..

ನವದೆಹಲಿ: ಗಂಡನ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಯೊಬ್ಬ ಮಾಲೀಕನ ಪತ್ನಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ದೆಹಲಿಯ ಚಾವ್ಲಾ ಪ್ರದೇಶದಲ್ಲಿ ನಡೆದಿದೆ.
ಶನಿವಾರ ರಾತ್ರಿ ಪತಿ ಮತ್ತು ಪತ್ನಿ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾರೆ. ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿ, ಪತಿ ಮೇಲಿನ ಮಹಡಿಗೆ ತೆರಳಿ ಅಲ್ಲಿನ ಕೊಠಡಿಯನ್ನು ಲಾಕ್ ಮಾಡಿಕೊಂಡು ಮಲಗಿದ್ದಾನೆ.
ಈ ವೇಳೆ ಮಹಿಳೆ ಕೊಠಡಿಯಲ್ಲಿ ಒಬ್ಬಳೆ ಇದ್ದದ್ದನ್ನು ನೋಡಿದ ಆಕೆಯ ಪತಿಯ ಬಳಿ ಕೆಲಸ ಮಾಡುವ ಸಿಬ್ಬಂದಿಯೊಬ್ಬ ರೂಮಿಗೆ ಬಂದು ಅತ್ಯಾಚಾರ ನಡೆಸಿದ್ದಾನೆ. ಈ ವೇಳೆ ಮಹಿಳೆ ಕೂಗಿಕೊಂಡರು ಮೇಲಿನ ಮಹಡಿ ಕೊಠಡಿಯಲ್ಲಿ ಮಲಗಿದ್ದ ಪತಿ ರಕ್ಷಣೆಗೆ ಬರಲಿಲ್ಲ ಎಂದು ಮಹಿಳೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


